AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಮೀಸಲು

ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ.

TV9 Web
| Updated By: ಆಯೇಷಾ ಬಾನು|

Updated on:Feb 17, 2023 | 2:03 PM

Share

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರೂ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿಯವರು(Basavaraj Bommai) ತಮ್ಮ ಎರಡನೇ ‘ರಾಜ್ಯ ಬಜೆಟ್’ ಮಂಡಿಸಿದ್ದಾರೆ. 2023-24ನೇ ಸಾಲಿನ ಬಜೆಟ್​ನಲ್ಲಿ(Karnataka Budget 2023) ಬಂಪರ್ ಕೊಡಿಗೆಗಳನ್ನು, ಯೋಜನೆಗಳನ್ನು ನೀಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ(Karnataka Assembly Elections 2023) ಜನ ಸ್ನೇಹಿ ಬಜೆಟ್ ಮಂಡನೆ ಮಾಡಲಾಗಿದೆ. ಇನ್ನು ಈ ಬಜೆಟ್​ನಲ್ಲಿ ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 475 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕಿತ್ತೂರು ಭಾಗದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದೂ ಸಿಎಂ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಅವರನ್ನ ಅಭಿನಂದಿಸುತ್ತ ಕುವೆಂಪು ಅವರ ಕವನವನ್ನ ಉಲ್ಲೇಖಿಸಿ ಸಿಎಂ ಬೊಮ್ಮಾಯಿಯವರು ಬಜೆಟ್​ ಮಂಡನೆ ಶುರು ಮಾಡುತ್ತಿದ್ದಂತೆ ವಿಪಕ್ಷಗಳು ಕ್ಯಾತೆ ತೆಗೆದಿದ್ದವು. ಸಿದ್ದರಾಮಯ್ಯನವರು ಕಿವಿ ಮೇಲೆ ಹೂವು ಇಟ್ಟುಕೊಂಡು ವಾಗ್ದಾಳಿಗೆ ಮುಂದಾದ್ರು. ಆಗ ಸಿದ್ದುಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ ಮುಂದಿನ ಸಲವು ನಿಮ್ಮ ಕಿವಿ ಮೇಲೆ ಹೂ ಇಡ್ತೀವಿ ಎಂದರು. ಇದಕ್ಕೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ರು. ಬಜೆಟ್ ಮಂಡನೆಗೂ ಮುನ್ನವೇ ವಿಪಕ್ಷ ಸದಸ್ಯರಿಂದ ಕಲಾಪದಲ್ಲಿ ತೀವ್ರ ಗದ್ದಲ, ಘೋಷಣೆ ಭುಗಿಲೆದ್ದಿತ್ತು.

ಇದನ್ನೂ ಓದಿ: Karnataka Budget 2023: ಮುಖ್ಯಮಂತ್ರಿಯ ಹೂ ಇಡುವ ಮಾತಿನಿಂದ ಕೆರಳಿದ ಸಿದ್ದರಾಮಯ್ಯ ಸ್ಪೀಕರ್ ಜೊತೆ ವಾಗ್ವಾದಕ್ಕಿಳಿದರು!

ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಮೀಸಲು

ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,000 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದರು.

ಕರ್ನಾಟಕ ಬಜೆಟ್ ಲೈವ್ ಅಪ್​ಡೇಟ್ಸ್

ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು

Published On - 12:36 pm, Fri, 17 February 23