Karnataka Budget 2023: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
2023-24ನೇ ಸಾಲಿನ ಮೊದಲ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ (Karnataka Budget 2023) ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದಾರೆ. ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು ಮತ್ತು ದುರಸ್ತಿಗೆ ಅನುದಾನ ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಹಣ ಮೀಸಲಿಟ್ಟಿದ್ದಾರೆ.
ಇದನ್ನೂ ಓದಿ: Liquor Prices in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ
- ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ
- ಬೆಂಗಳೂರು ವೈಟ್ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು ಮತ್ತು ದುರಸ್ಥಿಗೆ 30 ಸಾವಿರ ಕೋಟಿ ರೂ.
- ಮೆಟ್ರೋ , ಬೆಂಗಳೂರು ಉಪನಗರ ರೈಲು ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಯೋಜನೆ.
- ತಾಜ್ಯ ನಿರ್ವಾಹಣೆ 1411 ಕೋಟಿ ರೂ. ಮೀಸಲು.
- ಮೇಟ್ರೋ 3ನೇ ಹಂತದ ಯೋಜನೆಗೆ 16328 ಕೋಟಿ ಯೋಜನ ವೆಚ್ಚ, 45 ಕಿ.ಮೀ ಉದ್ದದ ವಿಸ್ತೃತ ಯೋಜನೆ ವರದಿ ಕೇಂದ್ರ ಸಲ್ಲಿಸಲಾಗುವುದು.
- ಬೈಯಪ್ಪನಹಳ್ಳಿಯಲ್ಲಿ ಮೇಲು ಸೇತುವೆ ನಿರ್ಮಾಣಗೆ 263 ಕೋಟಿ ರೂ.
- ಬೆಂಗಳೂರು ಸಂಚಾರ ದಟ್ಟಣೆ ನಿರ್ವಾಹಣೆಗೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಪ್ಲ್ಯಾನ್.
- ಮಳೆ ಅನಾಹುತ ತಪ್ಪಿಸಲು ರಾಜಕಾಲುವೆ ಒತ್ತುವರಿ ತೆರವು
ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 1:00 pm, Fri, 7 July 23