Karnataka Budget 2023: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

| Updated By: ರಮೇಶ್ ಬಿ. ಜವಳಗೇರಾ

Updated on: Jul 07, 2023 | 1:01 PM

2023-24ನೇ ಸಾಲಿನ ಮೊದಲ ಬಜೆಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

Karnataka Budget 2023: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2023) ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದಾರೆ. ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು ಮತ್ತು ದುರಸ್ತಿಗೆ ಅನುದಾನ ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಹಣ ಮೀಸಲಿಟ್ಟಿದ್ದಾರೆ.

ಇದನ್ನೂ ಓದಿ: Liquor Prices in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

  • ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ
  • ಬೆಂಗಳೂರು ವೈಟ್‌ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು ಮತ್ತು ದುರಸ್ಥಿಗೆ 30 ಸಾವಿರ ಕೋಟಿ ರೂ.
  •  ಮೆಟ್ರೋ , ಬೆಂಗಳೂರು ಉಪನಗರ ರೈಲು ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ ಯೋಜನೆ.
  •  ತಾಜ್ಯ ನಿರ್ವಾಹಣೆ 1411 ಕೋಟಿ ರೂ. ಮೀಸಲು.
  • ಮೇಟ್ರೋ 3ನೇ ಹಂತದ ಯೋಜನೆಗೆ 16328 ಕೋಟಿ ಯೋಜನ ವೆಚ್ಚ, 45 ಕಿ.ಮೀ ಉದ್ದದ ವಿಸ್ತೃತ ಯೋಜನೆ ವರದಿ ಕೇಂದ್ರ ಸಲ್ಲಿಸಲಾಗುವುದು.
  •  ಬೈಯಪ್ಪನಹಳ್ಳಿಯಲ್ಲಿ ಮೇಲು ಸೇತುವೆ ನಿರ್ಮಾಣಗೆ 263 ಕೋಟಿ ರೂ.
  •  ಬೆಂಗಳೂರು ಸಂಚಾರ ದಟ್ಟಣೆ ನಿರ್ವಾಹಣೆಗೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಪ್ಲ್ಯಾನ್.
  • ಮಳೆ ಅನಾಹುತ ತಪ್ಪಿಸಲು ರಾಜಕಾಲುವೆ ಒತ್ತುವರಿ ತೆರವು

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:00 pm, Fri, 7 July 23