Karnataka Budget 2023: ಪ್ರವಾಸಿಗರ ರಕ್ಷಣೆಗಾಗಿ ಮಿನಿ ವಿಮಾನ ನಿಲ್ದಾಣಗಳ ನಿರ್ಮಾಣ, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬಜೆಟ್​​ನಲ್ಲಿ ಕೈಗೊಂಡ ಇನ್ನಿತರ ಕ್ರಮಗಳು ಹೀಗಿವೆ

ಕರ್ನಾಟಕ ಬಜೆಟ್ 2023: ಕರ್ನಾಟಕದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದ್ದು, ವಿಪತ್ತು ನಿರ್ವಹಣೆಗಾಗಿ ಹೊಸ ಏರ್​ಸ್ಟ್ರಿಪ್​ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ.

Karnataka Budget 2023: ಪ್ರವಾಸಿಗರ ರಕ್ಷಣೆಗಾಗಿ ಮಿನಿ ವಿಮಾನ ನಿಲ್ದಾಣಗಳ ನಿರ್ಮಾಣ, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬಜೆಟ್​​ನಲ್ಲಿ ಕೈಗೊಂಡ ಇನ್ನಿತರ ಕ್ರಮಗಳು ಹೀಗಿವೆ
ಕರ್ನಾಟಕ ಬಜೆಟ್ 2023 ರಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಕ್ರಮ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Jul 07, 2023 | 3:31 PM

ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್​​ನಲ್ಲಿ (Karnataka Budget 2023) ಕ್ರಮ ಕೈಗೊಂಡಿದ್ದು, ವಿಪತ್ತು ನಿರ್ವಹಣೆಗಾಗಿ ಹೊಸ ಏರ್​ಸ್ಟ್ರಿಪ್​ಗಳನ್ನು (ಸಣ್ಣ ವಿಮಾನ ನಿಲ್ದಾಣಗಳು) ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆಗಾಗಿ ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಈ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದಲ್ಲದೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವುಗಳು ಈ ಕೆಳಗಿನಂತಿವೆ.

  1. ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕ್ರಮ.
  2. ಒಂದು ರಾಜ್ಯ ಹಲವು ಜಗತ್ತು ಎಂಬ ಘೋಷಾವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ, ಈ ಹಿನ್ನೆಲೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್ ಪ್ಲಾನ್ ತಯಾರಿಸಲು ಕ್ರಮ.
  3. ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮಯತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ.ಗಳನ್ನು ಒದಗಿಸಲು ಕ್ರಮ.
  4. ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರ ಅಭಿವೃದ್ಧಿಗೆ ಕ್ರಮ.
  5. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿಗೆ ಕ್ರಮ.
  6. ಸಸಿಹುತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್​ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲು ಕ್ರಮ.
  7. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ ಅಥವಾ ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲು ಕ್ರಮ.
  8. ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ಕ್ರಮ.
  9. ರಾಜ್ಯದಲ್ಲಿರುವ 16 ವಸ್ತು ಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮ. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಕ್ರಮ.
  10. ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಆಧುನಿಕ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣಕ್ಕೆ ಕ್ರಮ.
  11. ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3ಡಿ ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಶೋಗೆ ಕ್ರಮ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್