Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: APMC ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಿದ ಸಿದ್ದರಾಮಯ್ಯ

ಹಿಂದಿನ ಸರ್ಕಾರದ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗುತ್ತೆ. APMC ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಘೋಷಿಸಿದ್ದಾರೆ.

Karnataka Budget 2023: APMC ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಿದ ಸಿದ್ದರಾಮಯ್ಯ
ಸಿಎಂ ಘೋಷಣೆ ಮಾಡ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸರ್ಕಾರದ‌ ನಿರ್ಧಾರವನ್ನು ಸ್ವಾಗತಿಸಿದರು.
Follow us
TV9 Web
| Updated By: ಆಯೇಷಾ ಬಾನು

Updated on:Jul 07, 2023 | 1:33 PM

ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah) 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ(Karnataka Budget 2023). ಇದು ಅವರ 14ನೇ ಬಜೆಟ್ ಆಗಿದ್ದು ರೈತ ವಿರೋಧಿ ಕಾಯಿದೆ ಎಪಿಎಂಸಿ ಕಾಯಿದೆ ವಾಪಸ್ಸು ಪಡೆಯುವುದಾಗಿ ಘೋಷಿಸಿದ್ದಾರೆ(APMC Amendment Act). ಸಿಎಂ ಘೋಷಣೆ ಮಾಡ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸರ್ಕಾರದ‌ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ರೈತರಿಗೆ ಈ ಶುಕ್ರವಾರ ಶುಭವಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆಯಿರಿ ಎಂದು ಹಲವು ಹೋರಾಟಗಳು ನಡೆದಿದ್ದವು. ಸದ್ಯ ರೈತರ ಆಸೆ ಈಡೇರಿದೆ.

ಜುಲೈ 07ರ ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರು ರೈತರಿಗೆ ಭಾರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಹಿಂದಿನ ಸರ್ಕಾರದ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಗೆ ಭಾರಿ ವಿರೋಧಗಳು ವ್ಯಕ್ತವಾಗಿದ್ದವು. ರೈತರು ಹೋರಾಟಕ್ಕಿಳಿದಿದ್ದರು. ಸದ್ಯ ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗುತ್ತೆ. APMC ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಿಎಂ ಘೋಷಿಸಿದ್ದಾರೆ.

ಇದನ್ನೂ ಓದಿ: Karnataka Budget 2023: ತವರು ಜಿಲ್ಲೆಗೆ ಬಂಪರ್​ ಕೊಡುಗೆ ನೀಡಿದ ಸಿದ್ದರಾಮಯ್ಯ; ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ

ಇನ್ನು ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎಪಿಎಂಸಿಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯ ಮೊದಲು, 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಇತ್ತು, ಅದೇ 2022-23 ರಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತದೃಷ್ಟಿಯಿಂದ ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಬಜೆಟ್​ಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:19 pm, Fri, 7 July 23