Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ನೀರಾವರಿ ವಲಯಕ್ಕೆ ಸಿಕ್ಕ ಅನುದಾನವೆಷ್ಟು?

Irrigation Department Budget: ಈ ಬಾರಿಯ ಬಜೆಟ್​ನಲ್ಲಿ ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆಗೆ 19,044 ಕೋಟಿ ಮೀಸಲಿಡಲಾಗಿದ್ದು ನೀರಾವರಿ ಇಲಾಖೆಗೆ ಹೆಚ್ಚಿದ ಆಧ್ಯತೆ ನೀಡಿದ್ದಾರೆ.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ನೀರಾವರಿ ವಲಯಕ್ಕೆ ಸಿಕ್ಕ ಅನುದಾನವೆಷ್ಟು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 07, 2023 | 3:40 PM

ಬೆಂಗಳೂರು: 2023-24ನೇ ಸಾಲಿನ ಬಹುನಿರೀಕ್ಷಿತ ರಾಜ್ಯ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯನವರು(Siddaramaiah) ಇಂದು(ಜುಲೈ 07) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ(Karnataka Budget 2023) ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆಗೆ(Irrigation Department) 19,044 ಕೋಟಿ ಮೀಸಲಿಡಲಾಗಿದ್ದು ನೀರಾವರಿ ಇಲಾಖೆಗೆ ಹೆಚ್ಚಿದ ಆಧ್ಯತೆ ನೀಡಿದ್ದಾರೆ.

ಹಿಂದಿನ ಸರ್ಕಾರದ ನೀರಾವರಿ ಯೋಜನೆ ಕೈಬಿಡಲು ನೂತನ ಸರ್ಕಾರ ನಿರ್ಧಾರ ಮಾಡಿದ್ದು 19 ಕೆರೆ ತುಂಬಿಸುವ ಯೋಜನೆಗೆ 770 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಯಾದಗರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೂ ಎತ್ತಿನಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದ್ದು ಮಹದಾಯಿ ಯೋಜನೆ ಕಾಮಗಾರಿಗೆ ಮರು ಚಾಲನೆ ನೀಡಲು ನಿರ್ಧರಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆೆ ಕೇಂದ್ರ ಸರ್ಕಾರ ಮೀಸಲಿಟ್ಟ 5,300 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆ. ತುಂಗಾಭದ್ರಾ ಜಲಾಶಯದ ಹೂಳೆತ್ತಲು ಯೋಜನೆ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದರು.

ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ ಕೃಷ್ಣಾ ಮೇಲ್ದಂಡೆ ಯೋಜನೆ 1 ಮತ್ತು 2ನೇ ಹಂತ ವಿಸ್ತರಣೆ ಮಾಡಲಾಗುತ್ತಿದ್ದು ಶೀಘ್ರ ಚಾಲನೆ ನೀಡಲಾಗುತ್ತೆ. ಇದರಿಂದ 130 ಟಿಎಂಸಿ ನೀರು ಬಳಕೆಗೆ ಅನುಕೂಲವಾಗಲಿದೆ. ಸನ್ನತಿ ಏತ ನೀರಾವರಿ ಯೋಜನೆಗೆ ಕೇಂದ್ರದಿಂದ ಸಹಾಯಧನ ಪಡೆಯಲು ರಾಜ್ಯಸರ್ಕಾರ ನಿರ್ಧರಿಸಿದೆ. ಟಿಬಿ ಡ್ಯಾಮ್ ಹೂಳೆತ್ತಲು ಯೋಜನೆ ಅನುಷ್ಠಾನ, ಪರ್ಯಾಯವಾಗಿ ಸಮತೋಲನ ಡ್ಯಾಮ್ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ನವಿಲೆ ಬಳಿ ಜಲಾಶಯ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು ನೆರೆಯ ಆಂಧ್ರ & ತೆಲಂಗಾಣ ಜೊತೆ ಚರ್ಚಿಸಲು ಸಮಿತಿ ರಚನೆ ಮಾಡಲಾಗಿದೆ ಎಂದರು.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 296 ಕೆರೆ ತುಂಬಿಸಲು ನಿರ್ಧಾರ

ಕೆಸಿ ವ್ಯಾಲಿ ಮತ್ತು ಹೆಚ್​ಎನ್ ವ್ಯಾಲಿ ಯೋಜನೆಗಳಿಗೆ ಅನುದಾನ ನೀಡಲಾಗುತ್ತೆ. ಸಂಸ್ಕರಿಸಿದ ನೀರನ್ನು ಕೆರೆಗಳನ್ನು ತುಂಬಲು ನಿರ್ಧಾರ ಮಾಡಲಾಗಿದೆ. ಏತ ನೀರಾವರಿ ಯೋಜನೆ ಮೂಲಕ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 296 ಕೆರೆ ತುಂಬಿಸಲು ನಿರ್ಧಾರ ಮಾಡಲಾಗಿದ್ದು ಕೆರೆಗಳನ್ನು ತುಂಬಿಸುವ ಯೋಜನೆಗೆ 529 ಕೋಟಿ ಹಣ ಮೀಸಲಿಡಲಾಗಿದೆ ಎಂದರು.

ಇದನ್ನೂ ಓದಿ: Karnataka Budget 2023: ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್​​ಗಳಿಗೆ 4 ಲಕ್ಷ ರೂ. ಜೀವ, ಅಪಘಾತ ವಿಮೆ; ಬಜೆಟ್​​ನಲ್ಲಿ ಘೋಷಣೆ

ಇನ್ನು ಜಲಜೀವನ್ ಮಿಷನ್ ಯೋಜನೆಯ ಲೋಪ ಪತ್ತೆ ಹಚ್ಚಲು ಬಾಹ್ಯ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ಬಜೆಟ್​​​ನಲ್ಲಿ ಪ್ರಸ್ತಾಪ ಮಾಡಲಾಯಿತು. ಯೋಜನೆ ಜಾರಿಯಲ್ಲಿನ ಲೋಪದೋಷಗಳ ಬಗ್ಗೆ ತನಿಖೆಗೆ ನಿರ್ಧಾರ ಮಾಡಲಾಗಿದ್ದು ಲೋಪದೋಷ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:20 pm, Fri, 7 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್