AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026: ಕರ್ನಾಟಕ ಬಜೆಟ್​​​ಗೆ ದಿನಾಂಕ ನಿಗದಿ; ಯಾವಾಗ? ಎಷ್ಟು ಗಂಟೆಗೆ?

ಕರ್ನಾಟಕ ಬಜೆಟ್ 2026: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್​ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಮಾ.6 ರಂದು ಸಿಎಂ‌ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Budget 2026: ಕರ್ನಾಟಕ ಬಜೆಟ್​​​ಗೆ ದಿನಾಂಕ ನಿಗದಿ; ಯಾವಾಗ? ಎಷ್ಟು ಗಂಟೆಗೆ?
ಸಿಎಂ ಸಿದ್ದರಾಮಯ್ಯImage Credit source: cm twitter
Sunil MH
| Edited By: |

Updated on:Feb 19, 2026 | 1:40 PM

Share

ಬೆಂಗಳೂರು, ಫೆಬ್ರವರಿ 12: ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕುರ್ಚಿ ಕಾಳಗ ಮಧ್ಯೆ ಇದೀಗ 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ (Karnataka Budget) ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಸಿಎಂ‌ ಸಿದ್ದರಾಮಯ್ಯ (Siddaramaiah) ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಸಿಎಂ ಹಾಗೂ ರಾಜ್ಯದ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಆ ಮೂಲಕ ಅವರು ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಸಾಲಿನಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳಲಿದ್ದಾರೆ.

ಸಚಿವ ಹೆಚ್‌.ಕೆ.ಪಾಟೀಲ್ ಹೇಳಿದ್ದಿಷ್ಟು 

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್, ಮಾರ್ಚ್ 6ರಿಂದ 27ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್‌ 6ರಂದು ಸಿಎಂ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.

ಆಧಾರ್ ಕಾರ್ಡ್‌ ತೋರಿಸಿ ಉಚಿತ ಪ್ರಯಾಣಕ್ಕೆ ಬ್ರೇಕ್ ಹಾಕಿದ ಸರ್ಕಾರ 

ಸಂಪುಟ ಸಭೆಯಲ್ಲಿ ಚರ್ಚೆ ಆದ ವಿಚಾರಗಳ ಬಗ್ಗೆ ಪ್ರತಿಯಿಸಿದ ಅವರು, ಶಕ್ತಿ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆಗೆ ಕ್ಯಾಬಿನೆಟ್‌ ನಿರ್ಧರಿಸಿದೆ. ಆ ಮೂಲಕ ಆಧಾರ್ ಕಾರ್ಡ್‌ ತೋರಿಸಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳಿಂದ ವಿತರಣೆ ಮಾಡಲಾಗುತ್ತಿದ್ದು, ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದರು.

ಇದನ್ನೂ ಓದಿ: ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ಎಸ್‌ಐಆರ್ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಕಾನೂನಾತ್ಮಕ ವಿಚಾರಗಳ‌ ಬಗ್ಗೆ ಚರ್ಚೆಯಾಗಿದೆ, ಆಳವಾದ ಅಧ್ಯಯನ ಅಗತ್ಯವಿದೆ. ವರದಿ ನೀಡುವಂತೆ ಕಾನೂನು ಇಲಾಖೆಗೆ ಸಂಪುಟ ಸಭೆ ಸೂಚಿಸಿದೆ. ನಮ್ಮ ಇಲಾಖೆ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ ಎಂದು ಸಚಿವ ಹೆಚ್‌.ಕೆ.ಪಾಟೀಲ್​ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ‘ಶಾಶ್ವತ ವಿಶೇಷ’ ಕೃಷಿ ವಲಯ ಎಂದು ಘೋಷಿಸಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಿದೆ.

ಕೊನೆಗೂ ಬೆಂಗಳೂರು ಟರ್ಫ್ ಕ್ಲಬ್ ಕುಣಿಗಲ್‌ಗೆ ಶಿಫ್ಟ್

ಇನ್ನು ಕೊನೆಗೂ ಬೆಂಗಳೂರು ಟರ್ಫ್ ಕ್ಲಬ್ ಅನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್‌ ಫಾರ್ಮ್‌ಗೆ ಶಿಫ್ಟ್‌ ಮಾಡಲಾಗಿದೆ. ಕ್ಲಬ್ ಜಾಗವನ್ನು ಹಾಗೇ ಉಳಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಲೀಸ್ ಅವಧಿ ಮುಕ್ತಾಯ, ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ, ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಿಂದ ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿನ 14 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ನೀಡಲು 15 ರಿಂದ 34 ಕೋಟಿ ರೂ ಅಂದಾಜು ಮೊತ್ತದಲ್ಲಿ ಖರೀದಿಸಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:28 pm, Thu, 12 February 26

Follow Us
Sunil MH
Sunil MH
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?