AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಕರ್ನಾಟಕ ಬಜೆಟ್ 2026-27 ರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರಿಗೆ ಇದು ಅನ್ವಯ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಈ ಕ್ರಮದಿಂದ ಸಾವಿರಾರು ಮಹಿಳೆಯರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ನೆರವಾಗಲಿದೆ.

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ
ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಜಾರಿ
ಭಾವನಾ ಹೆಗಡೆ
|

Updated on: Mar 06, 2026 | 2:55 PM

Share

ಬೆಂಗಳೂರು, ಮಾರ್ಚ್​ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್  (Karnataka Budget) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ. ಇದುವರೆಗೆ ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆಯ ಕುರಿತು ಸ್ಪಷ್ಟ ಸೌಲಭ್ಯ ಇರಲಿಲ್ಲ ಎಂಬ ಕಾರಣದಿಂದ ಹಲವು ಮಹಿಳಾ ಉಪನ್ಯಾಸಕರು ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಸರ್ಕಾರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದರ ಮೂಲಕ ಮಹಿಳಾ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ಸಹಕಾರವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

ಅಲ್ಲದೇ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರಿಸಲಾಗುವುದಾಗಿ ಅವರು ತಿಳಿಸಿದ್ದಾರೆ. ಅಜೀಂ ಪ್ರೇಮ್‌ಜಿ ಫೌಂಡೇಷನ್‌ ವತಿಯಿಂದ 2025–26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬಾರದ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ‘ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ’ ಅಡಿಯಲ್ಲಿ ಆರ್ಥಿಕ ಸಹಾಯ ಒದಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us