ನವೋದ್ಯಮಗಳಿಗೆ 75 ಕೋಟಿ ವೆಚ್ಚದಲ್ಲಿ ಕ್ಲಸ್ಟರ್ ಸೀಡ್ ಫಂಡ್, ಅಥಣಿ, ಮುಧೋಳದಲ್ಲಿ 50 ಹಾಸಿಗೆಯ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 37.98 ಕೋಟಿ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶಹಾಪೂರ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ನಿರ್ಮಾಣ ಮಾಡಲು ನಿಗಮದ 198.35 ಚ.ಮೀ ಜಾಗವನ್ನು ಉಚಿತವಾಗಿ ಒದಗಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕುಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ 37.98 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹುನಗುಂದದಲ್ಲೂ ಆಸ್ಪತ್ರೆ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಹಾಗೇ, ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ನವೋದ್ಯಮಗಳಿಗೆ 75 ಕೋಟಿ ರೂ. ಮೊತ್ತದಲ್ಲಿ ಕ್ಲಸ್ಟರ್ ಸೀಡ್ ಫಂಡ್ ಸ್ಥಾಪನೆ ಮಾಡಲಾಗಿದೆ. ಕ್ಲಸ್ಟರ್ ಸೀಡ್ ಫಂಡ್ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಹೇಳಿಕೆ ನೀಡಿದ್ದಾರೆ.
ದರ್ಗಾದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವ ಕಾಮಗಾರಿ ನಡೆಸಲು 31.99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಯ ಚಿಂತಾಮಣಿ ತಾಲ್ಲೂಕಿನ ಮುರಗಮಲ್ಲಾ ಗ್ರಾಮದಲ್ಲಿರುವ ಹಜರತ್ ಫಖೀ-ಷಾ-ವಲೆ -ಅಮ್ಮಾಜಾನ್ ಬಾವಾಜಾನ್ ದರ್ಗಾದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಯನ್ನು 31.99 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಡೆಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಾಗೇ, ಲೋಕಾಯುಕ್ತದ ವಾರ್ಷಿಕ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದ್ದು, ವಿಧಾನ ಮಂಡಲದ ಅಧಿವೇಶನದಲ್ಲಿ ಲೋಕಾಯುಕ್ತ ವಾರ್ಷಿಕ ವರದಿ ಮಂಡಿಸಲು ರಾಜ್ಯಪಾಲರಿಗೆ ರವಾನೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಇದನ್ನೂ ಓದಿ: ಜಾತಿಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ
ಸರ್ಕಾರದ ಹಲವು ಇಲಾಖೆಗಳಲ್ಲಿನ ಸಿವಿಲ್ ಕಾಮಗಾರಿಗಳ ಹಲವಾರು ಅಂದಾಜುಗಳು ಅಧಿಕ ಹೆಚ್ಚುವರಿಗಳಿಂದ ಪರಿಷ್ಕೃತಗೊಳ್ಳುತ್ತಿದೆ. ಇದರ ಕುರಿತು ಅಧ್ಯಯನಕ್ಕಾಗಿ ನಿವೃತ್ತ ಪ್ರಧಾನ ಅಭಿಯಂತರರಾದ ಬಿ. ಗುರುಪ್ರಸಾದ್ ಅಧ್ಯಕ್ಷತೆಯಲ್ಲಿ ರಚಿಸಲಾದ ಕಾಮಗಾರಿ ತಯಾರಿಕಾ ಅಧ್ಯಯನ ಸಮಿತಿಯು ಮಾಡಿರುವ ಶಿಫಾರಸುಗಳನ್ನ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಸಮಿತಿ ನೀಡಿರುವ ಶಿಫಾರಸುಗಳನ್ನು ಪರಿಶೀಲನೆ ಮಾಡಲು ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ ಮಂತ್ರಿಗಳು ಕಾರ್ಯದರ್ಶಿಗಳು ಚರ್ಚಿಸಿ ಮುಂದಿನ ಕ್ಯಾಬಿನೆಟ್ ಗೆ ತರಲು ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: ಬಿಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಲು ವಿಧಾನಸೌಧದೊಳಗೆ ವ್ಹೀಲ್ ಚೇರ್ನಲ್ಲಿ ಹೋದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಕಟ್ಟಡವನ್ನು 25 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ನಿವೇಶನ ಲಭ್ಯವಿರುವ 61 ವಸತಿ ಶಾಲೆಗಳಿಗೆ ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣದ ಕಾಮಗಾರಿಯನ್ನು ಒಟ್ಟು 1292.50 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶಹಾಪೂರ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ನಿರ್ಮಾಣ ಮಾಡಲು ನಿಗಮದ 198.35 ಚ.ಮೀ ಜಾಗವನ್ನು ಉಚಿತವಾಗಿ ಒದಗಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ, ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡವಾದ ಪ್ರಜಾಸೌಧ ನಿರ್ಮಾಣಕ್ಕೆ 10.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಾವೇರಿ ಜಿಲ್ಲೆಯ ಶಿಗಾಂವ್ ತಾಲೂಕು, ಗುಡ್ಡದಚನ್ನಾಪುರೆ ಗ್ರಾಮದ ರಿ.ಸ.ನಂ.84ರಲ್ಲಿ 2-00 ಎಕೆರೆ “ಗೋಮಾಳ” ಜಮೀನನ್ನು ಹೊರಬೀರಲಿಂಗೇಶ್ವರ ಸೇವಾ ಸಮಿತಿಗೆ ಮಂಜೂರು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಭೂಮಾಪನ ಕಾರ್ಯಕ್ಕಾಗಿ ಆಧುನಿಕ ಸರ್ವೆ ಉಪಕರಣಗಳನ್ನು ಒದಗಿಸುವ ನಿಟ್ಟಿನಲ್ಲಿ 5000 GNSS Rovers 175 ಕೋಟಿ ಅಂದಾಜು ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ