ಕರ್ನಾಟಕ ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸಾರಿಗೆ ನೌಕರರು ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಶೇ 14ರಷ್ಟು ವೇತನ ಹೆಚ್ಚಳಕ್ಕೆ ಮುಂದಾಗಿತ್ತು. ಆದರೆ ಇದನ್ನು ನೌಕರರರು ನಿರಾಕರಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಶೇ 15ರಷ್ಟು ಹೆಚ್ಚಳಕ್ಕೆ ಸಂಪಟದಲ್ಲಿ ಅನುಮೋದನೆ ಪಡೆದುಕೊಂಡಿದೆ.

ಕರ್ನಾಟಕ ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
Follow us
|

Updated on: Jun 15, 2023 | 5:21 PM

ಬೆಂಗಳೂರು: ಸಾರಿಗೆ ನೌಕರರ (Transport Employees) ವೇತನವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಏಪ್ರಿಲ್ ತಿಂಗಳಿಂದ ಪೂರ್ವಾನ್ವಯವಾಗುವಂತೆ ತೀರ್ಮಾನ ಮಾಡಲಾಗಿದೆ. ಆದರೆ ಇದಕ್ಕೆ ಸಾರಿಗೆ ನೌಕರರು ಒಪ್ಪುವರೇ? ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿರುವ ನೌಕರರು, ಬಿಜೆಪಿ ಸರ್ಕಾರ ಶೇ 14, ಶೇ 17ರಷ್ಟು ವೇತನ ಹೆಚ್ಚಳಕ್ಕೆ ಮುಂದಾಗಿದ್ದಾಗಲೇ ನಿರಾಕರಿಸಿ ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದರು.

ಇನ್ಸೆಟಿವ್ ಹೆಚ್ಚು ಮಾಡುವುದು, ಬಾಟಾವನ್ನ ಹೆಚ್ಚು ಮಾಡುವುದು, ಶೇ. 25 ರಷ್ಟು ವೇತನ ಹೆಚ್ಚಳ ಮಾಡುವುದು, ಜೊತೆಗೆ ವಜಾ ಮಾಡಿದ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವುದು ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಾಗಿವೆ. ಈ ಪೈಕಿ ವೇತನ ಹೆಚ್ಚಳಕ್ಕೆ ಮುಂದಾಗಿರುವ ಕಾಂಗ್ರೆಸ್, ಸಚಿವ ಸಂಪುಟ ಸಭೆಯಲ್ಲಿ ಶೇ 15ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ಪಡೆದುಕೊಂಡಿದೆ.

ಇದನ್ನೂ ಓದಿ: Cabinet Meeting: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ತೀರ್ಮಾನ, ಪಠ್ಯ ಪರಿಷ್ಕರಣೆಗೆ ಅಸ್ತು ಎಂದ ಸಿದ್ದರಾಮಯ್ಯ ಸಂಪುಟ!

ಶೇಕಡಾ 14ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದರೂ ನಾವು ಒಪ್ಪಿಲ್ಲ, ಕೆಪಿಟಿಸಿಎಲ್ ನೌಕರರಿಗೆ ಶೇ 20, ಸರ್ಕಾರಿ ನೌಕರರಿಗೆ ಶೇ 17ರಷ್ಟು ವೇತನ ಹೆಚ್ಚಿಸಿದ್ದಾರೆ. ಸಾರಿಗೆ ನೌಕರರಿಗೆ ಶೇ 14ರಷ್ಟು ಸಂಬಳ ಹೆಚ್ಚಿಸುವುದು ಎಷ್ಟು ಸರಿ? ಅಂತ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್​.ವಿ. ಅನಂತ ಸುಬ್ಬರಾವ್ ಹೇಳಿಕೆ ನೀಡಿದ್ದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅಂದಿನ ಬಿಜೆಪಿ ಸರ್ಕಾರವು ಸಂಧಾನಸಭೆಗಳನ್ನು ನಡೆಸಿ ಮನವೋಲಿಸುವ ಪ್ರಯತ್ನಗಳನ್ನು ನಡೆಸಿತ್ತು. ಆದರೆ ಯಾವುದೇ ಸಭೆಯಲ್ಲಿ ಒಮ್ಮತ ಮೂಡಿಬರುತ್ತಿರಲಿಲ್ಲ. ಶೇ 14ರ ನಂತರ ಶೇ 17 ರಷ್ಟು ವೇತನ ಹೆಚ್ಚಳ ಮಾಡಿ ಆದೇಶವೂ ಹೊರಡಿಸಲಾಗಿತ್ತು. ಆದರೆ ಇದಕ್ಕೂ ಒಪ್ಪದ ಸಂಘ, ನಾವು ಇಷ್ಟು ವರ್ಷಗಳಿಂದ ಪ್ರಭಟನೆ ನಡೆಸುತ್ತಿದ್ದರೂ, ಗಮನ ಹರಿಸುತ್ತಿಲ್ಲ. ಅವರು ಕೇವಲ ಶೇ 10 ರಷ್ಟು ಮಾತ್ರ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಾವು ಅದನ್ನು ತಿರಸ್ಕರಿಸಿದ್ದೇವೆ ಅಂತ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ