10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಗೆ ಸಂಪುಟ ಒಪ್ಪಿಗೆ

|

Updated on: Jan 07, 2024 | 7:35 AM

ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ 10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್​​ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಲಿವೆ. ಡಬಲ್​ ಡೆಕ್ಕರ್​​ ಬಸ್​ಗಳಿಗೆ ಟೆಂಡರ್​ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್​ ಪೂರ್ಣವಾಗಲಿದೆ.

10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಗೆ ಸಂಪುಟ ಒಪ್ಪಿಗೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಜನವರಿ 07: ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ (Double-decker electric Buses) ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಈ 10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್​​ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚರಿಸಲಿವೆ. ನಗರದಲ್ಲಿ ಮತ್ತೆ ಡಬಲ್ ಡೆಕ್ಕರ್ ಬಸ್‌ಗಳು ಸದ್ದು ಮಾಡಲಿವೆ. ಡಬಲ್​ ಡೆಕ್ಕರ್​​ ಬಸ್​ಗಳಿಗೆ ಟೆಂಡರ್​ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್​ ಪೂರ್ಣವಾಗಲಿದೆ ಎಂದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು.

ಡಬಲ್ ಡೆಕ್ಕರ್ ಬಸ್‌ಗಳಿಗೆ ಅಂಡರ್‌ಪಾಸ್‌ ಮತ್ತು ಇತರ ಅಡೆತಡೆಗಳಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇದಕ್ಕಾಗಿ ಈಗಾಗಲೇ ಐದುಮಾರ್ಗ ರೂಪಿಸಲಾಗಿದೆ. ಈ ಡಬಲ್​ ಡೆಕ್ಕರ್​ ಬಸ್​ಗಳಿಗೆ ಬಿಎಂಟಿಸಿ ಬಸ್​ನ ಬಣ್ಣವನ್ನೇ ಅಂತಿಮಗೊಳಿಸಲಾಗಿದೆ. ಆದರೆ ಡಬಲ್​ ಡೆಕ್ಕರ್​​ ಬಸ್​ ವಿನ್ಯಾಸದ ಬಗ್ಗೆ ಚರ್ಚೆ ನಡೆದಿದೆ. ಜಪಾನ್​ ಡಬಲ್​ ಡೆಕ್ಕರ್​ ಬಸ್​ ಮಾದರಿಯನ್ನು ನನ್ನ ಆಪ್ತರು ಕಳಿಸಿದ್ದು, ಅದನ್ನು ಸಹ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕಳಿಸಿದ್ದೇನೆ ಎಂದಿದ್ದರು.

ಇದನ್ನೂ ಓದಿ: ಭಾರತದಲ್ಲಿ ಮೊದಲ ಬಾರಿಗೆ ಪಿ ಅಂಡ್ ಪಿ ಡಬಲ್ ಡೆಕರ್ ರೈಲು; ಕೆಳಗೆ ಸರಕು, ಮೇಲೆ ಜನರು

ಅಲ್ಲದೇ 120 ನಾನ್-ಎಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್​​ ಕರೆಯಲಾಗಿದೆ. ಬಸ್‌ಗಳಲ್ಲಿ ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಪ್ಯಾಸೆಂಜರ್ ಡಿಸ್‌ಪ್ಲೇ ಬೋರ್ಡ್‌ಗಳು, ಸಿಸಿಟಿವಿ ವ್ಯವಸ್ಥೆಗಳು ಮತ್ತು ಪ್ಯಾನಿಕ್ ಬಟನ್‌ಗಳು ಇತ್ಯಾದಿಗಳನ್ನು ಅಳವಡಿಸಲಾಗಿದೆ. ಫೆಬ್ರವರಿ 13 ರಂದು ಟೆಂಡರ್ ಪ್ರಾರಂಭವಾಗುವ ಸಾಧ್ಯತೆ ಇದೆ.

ಪ್ರಸ್ತುತ, ಬಿಎಂಟಿಸಿ 9ಮೀ ಉದ್ದದ 90 ನಾನ್-ಎಸಿ ಮತ್ತು ಅಶೋಕ್ ಲೇಲ್ಯಾಂಡ್‌ನ ಅಂಗಸಂಸ್ಥೆಯಾದ ಸ್ವಿಚ್ ಮೊಬಿಲಿಟಿ ಲಿಮಿಟೆಡ್‌ನ 12 ಮೀ ಉದ್ದದ 300 ಬಸ್‌ಗಳು ಸೇರಿದಂತೆ 390 ಇ-ಬಸ್‌ಗಳು ನಗರದಲ್ಲಿ ಕಾರ್ಯನಿರ್ವಹಿಸುತ್ತಿವೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Sun, 7 January 24