ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ 2,215 ಕೋಟಿ ರೂ. ಸುರಂಗ ಮಾರ್ಗಕ್ಕೆ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರವು ಹೆಬ್ಬಾಳ ಫ್ಲೈಓವರ್ ಮತ್ತು ಮೇಖ್ರಿ ವೃತ್ತದ ನಡುವೆ ಸುರಂಗ ರಸ್ತೆ ಮತ್ತು ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಒಟ್ಟು 2,215 ಕೋಟಿ ರೂ. ವೆಚ್ಚದಲ್ಲಿ ಇದರ ನಿರ್ಮಾಣ ಕಾರ್ಯ ನಡೆಯಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಈ ಯೋಜನೆಯನ್ನು ಕಾರ್ಯಗತಗೊಳಿಸಲಿವೆ.

ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ 2,215 ಕೋಟಿ ರೂ. ಸುರಂಗ ಮಾರ್ಗಕ್ಕೆ ಸಂಪುಟ ಅನುಮೋದನೆ
Tunnel

Updated on: Dec 06, 2025 | 8:06 PM

ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ಒದಗಿಸುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು 2,215 ಕೋಟಿ ರೂ.ಗಳಿಗೆ ಅವಳಿ ಸುರಂಗ ರಸ್ತೆ- ಹೆಬ್ಬಾಳ ಫ್ಲೈಓವರ್- ಮೇಖ್ರಿ ವೃತ್ತದ ನಡುವೆ ಸುರಂಗ ರಸ್ತೆ ಹಾಗೂ ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ (DK Shivakumar) ಅವರ ಆದೇಶದ ನಂತರ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಪ್ ಮತ್ತು ಡೌನ್ ಇಳಿಜಾರುಗಳೊಂದಿಗೆ ಅವಳಿ ಸುರಂಗ ರಸ್ತೆ ಮತ್ತು ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಗತಗೊಳಿಸಲಿವೆ. ರಾಷ್ಟ್ರೀಯ ಹೆದ್ದಾರಿ (NH)ಯ ಭಾಗವಾಗಿರುವ ಈ ರಸ್ತೆಯನ್ನು ಇನ್ನು ಮುಂದೆ ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೆಬ್ಬಾಳ ಲೇಕ್ ಸುತ್ತಲೂ ಭೂಮಿಯ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK) ಕ್ಯಾಂಪಸ್‌ನಲ್ಲಿರುವ ಭೂಮಿಯನ್ನು ಸಹ ಈ ಯೋಜನೆಯು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಶಿರಾಡಿ ಘಾಟ್​​​ನಲ್ಲಿ ರೈಲು-ರೋಡ್ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ

ಸಣ್ಣ ಸುರಂಗ ರಸ್ತೆ ಯೋಜನೆಯು ಮೇಖ್ರಿ ವೃತ್ತದಲ್ಲಿ ಬಳ್ಳಾರಿ ರಸ್ತೆಯ ಮಧ್ಯದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಅಂಡರ್‌ಪಾಸ್ ನಿರ್ಮಾಣ ಮತ್ತು ಹೆಬ್ಬಾಳ ಲೇಕ್​ನ ಎರಡೂ ಬದಿಗಳಲ್ಲಿ ರಸ್ತೆ ನಿರ್ಮಾಣದ ಜೊತೆಗೆ GKVK ಕ್ಯಾಂಪಸ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣವನ್ನು ಒಳಗೊಂಡಿರುತ್ತದೆ.

ಭೂಮಿಯ ಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳಿಂದಾಗಿ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆ ಅತ್ಯಂತ ಕಷ್ಟಕರವಾಗಿದೆ ಎಂದು ಗಮನಿಸಿದ ರಾಜ್ಯ ಸರ್ಕಾರವು 2024-25ರ ಬಜೆಟ್ ಭಾಷಣದಲ್ಲಿ ಸುರಂಗ ಮಾರ್ಗವನ್ನು ನಿರ್ಮಿಸುವ ಮೂಲಕ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಹರಿಸುವ ಉದ್ದೇಶವನ್ನು ಹೊಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ