Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಲೋಕಾಯುಕ್ತಕ್ಕೆ ಬಲ ತುಂಬಲು ಸಚಿವ ಸಂಪುಟ ಒಪ್ಪಿಗೆ; ಹೆಚ್ಚುವರಿ ರಿಜಿಸ್ಟ್ರಾರ್ ನೇಮಕ, ವೇತನ ಹೆಚ್ಚಳ

ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್​​ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾದ ವೇತನ ನೀಡಲು ಸಂಪುಟ ಒಪ್ಪಿಗೆ ಸೂಚಿಸಿತು.

Breaking News: ಲೋಕಾಯುಕ್ತಕ್ಕೆ ಬಲ ತುಂಬಲು ಸಚಿವ ಸಂಪುಟ ಒಪ್ಪಿಗೆ; ಹೆಚ್ಚುವರಿ ರಿಜಿಸ್ಟ್ರಾರ್ ನೇಮಕ, ವೇತನ ಹೆಚ್ಚಳ
ಲೋಕಾಯುಕ್ತ ಕಚೇರಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 14, 2022 | 7:18 PM

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ (Karnataka Lokayukta Amendment Bill) ಕರ್ನಾಟಕ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಲೋಕಾಯುಕ್ತ ಬಲಪಡಿಸುವ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆಯುತ್ತಿದೆ. ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್​​ ನೇಮಕಕ್ಕೂ ಸಚಿವ ಸಂಪುಟ ನಿರ್ಧರಿಸಿತು. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್​​ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾದ ವೇತನ ನೀಡಲು ಸಂಪುಟ ಒಪ್ಪಿಗೆ ಸೂಚಿಸಿತು. ಸಂಪುಟ ಸಭೆ ಆರಂಭಕ್ಕೂ ಮುನ್ನ ದಿವಂಗತ ಸಚಿವ ಉಮೇಶ್ ಕತ್ತಿ ಅವರಿಗೆ ಮೌನಾಚರಣೆ ಮೂಲಕ ಸಂಪುಟ ಸಚಿವರು ಸಂತಾಪ ಸೂಚಿಸಿದರು.

ಕರ್ನಾಟಕ ಸರ್ಕಾರವು ಹೊಸದಾಗಿ ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureu – ACB) ರಚನೆಯನ್ನು ರದ್ದುಪಡಿಸಿ, ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಲೋಕಾಯುಕ್ತ (Karnataka Lokayukta) ಸಂಸ್ಥೆಗೆ ಬಲ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬೆಳವಣಿಗೆಗೆ ಹೈಕೋರ್ಟ್​ ತೀರ್ಪು ಮುಖ್ಯ ಕಾರಣ. ಎಸಿಬಿ ರಚನೆ ರದ್ದುಪಡಿಸಿ, ಲೋಕಾಯುಕ್ತ ಬಲವರ್ಧನೆಗೆ ಆದೇಶ ಹೊರಬಿದ್ದ ಬೆನ್ನಲ್ಲೇ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತೊಂದು ಆದೇಶ ಹೊರಡಿಸಿ, ಸಂಬಂಧಿಸಿದ ಕಡತಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸೂಚಿಸಿದ್ದರು.

ಹೈಕೋರ್ಟ್ ಇತ್ತೀಚಿಗೆ ನೀಡಿದ್ದ ತೀರ್ಪಿನ ಪ್ರಮುಖ ಅಂಶಗಳನ್ನು ಕರ್ನಾಟಕ ಸರ್ಕಾರ ಪಾಲಿಸಿದೆ. ಅದರಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಪಡಿಸಲಾಗಿದೆ. ಲೋಕಾಯುಕ್ತ ಪೊಲೀಸರಿಗೆ ಭ್ರಷ್ಟಾಚಾರ ನಿಗ್ರಹದ ಅಧಿಕಾರ ನೀಡಲಾಗಿದೆ. ಲೊಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣೆಗಳಿಗೆ ಇರುವ ಅಧಿಕಾರವನ್ನು ಕೊಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ತನಿಖೆ ಬಾಕಿಯಿರುವ ಎಲ್ಲ ಪ್ರಕರಣಗಳು ಹಾಗೂ ಖಾಸಗಿ ದೂರುಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸೂಚಿಸಿದೆ.

Published On - 7:18 pm, Wed, 14 September 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್