AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​

Karnataka Cabinet Expansion: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಹಳೆಯ ಸಂಪುಟದಲ್ಲಿದ್ದ ಹಲವು ಹಿರಿಯ ಮುಖಂಡರಿಗೆ ಶಾಕ್ ನೀಡಲಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಹೊಸಬರಿಗೆ ಮಣೆ ಹಾಕದ ಹಿನ್ನೆಲೆಯಲ್ಲಿ ಹಾಗೂ ಹಿರಿಯ ನಾಯಕರನ್ನು ಕೈಬಿಟ್ಟಿರುವುದಕ್ಕೆ ರಾಜ್ಯದ ವಿವಿಧೆಡೆ ಆಕ್ರೋಶದ ಕಿಡಿ ಹೊತ್ತಿಕೊಂಡಿದೆ.

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​
ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರುImage Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on:Aug 03, 2026 | 3:09 PM

Share

ಮುಖ್ಯಾಂಶಗಳು

  • ಸಿಎಂ ಡಿಕೆಶಿ ಕ್ಯಾಬಿನೆಟ್​​ಗೆ ಇಂದು 20 ಜನರ ಸೇರ್ಪಡೆ
  • ಒಟ್ಟಾರೆ ಸಚಿವ ಸಂಪುಟದಲ್ಲಿ 11 ಮಂದಿ ಹೊಸಬರು
  • ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ನಿರಾಶೆ

ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟಕ್ಕೆ 20 ಮಂದಿ ನೂತನ ಸಚಿವರ ಸೇರ್ಪಡೆ ಆಗಲಿದ್ದು, ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಂಜೆ 5ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿದ್ದ ಹಲವು ಪ್ರಮುಖ ಶಾಸಕರಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದರೆ, ಮೊದಲ ಬಾರಿಗೆ ಸಚಿವರಾಗುವ ಆಸೆ ಹೊಂದಿದ್ದ ಅನೇಕ ನಾಯಕರ ಕನಸೂ ಭಗ್ನಗೊಂಡಿದೆ. ಹೀಗಾಗಿ ನಾಯಕರ ಬೆಂಬಲಿಗರ ಆಕ್ರೋಶದ ಕಟ್ಟೆ ಒಡೆದಿದ್ದು, ಪ್ರತಿಭಟನೆಗಳು ಆರಂಭವಾಗಿವೆ.

ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​

ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿದ್ದ ಡಾ.ಹೆಚ್​.ಸಿ.ಮಹದೇವಪ್ಪ, ಡಾ.ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್, ಹೆಚ್​.ಕೆ.ಪಾಟೀಲ್, ಕೆ.ವೆಂಕಟೇಶ್​, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ರಹೀಂ ಖಾನ್​, ತಿಮ್ಮಾಪುರ, ಮಂಕಾಳು ವೈದ್ಯ, ಎನ್​.ಎಸ್​.ಬೋಸರಾಜು, ಶರಣಬಸಪ್ಪ ದರ್ಶನಾಪುರಗೆ ಸಚಿವ ಸ್ಥಾನ ಕೈತಪ್ಪಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

11 ಮಂದಿ ಮಾತ್ರ ಹೊಸಬರು

ಒಟ್ಟೂ ಸಂಪುಟದಲ್ಲಿ ಕೇವಲ 11 ಮಂದಿ ಮಾತ್ರ ಹೊಸಬರಿಗೆ ಕಾಂಗ್ರೆಸ್​​ ಹೈಕಮಾಂಡ್​​ ಮಣೆ ಹಾಕಿದ್ದು, 22 ಮಂದಿಗೆ ಪುನಃ ಸಚಿವ ಸ್ಥಾನ ನೀಡಲಾಗಿದೆ. ಸಚಿವ ಸಂಪುಟದಲ್ಲಿ ಶೇಕಡಾ 60ರಷ್ಟು ಹೊಸಬರು ಮತ್ತು ಶೇಕಡಾ 40ರಷ್ಟು ಹಳಬರಿಗೆ ಅವಕಾಶ ನೀಡಲಾಗುತ್ತೆ ಎಂಬ ಮಾತುಗಳು ಕೇಳಿಬಂದಿದ್ದ ಹೊರತಾಗಿಯೂ ಒಟ್ಟಾರೆ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕಡಿಮೆ ಸಿಕ್ಕಿದೆ. ಮೂವರು ಮಹಿಳೆಯರಿಗೆ ಮಂತ್ರಿಗಿರಿ ನೀಡುವ ಬಗ್ಗೆ ಒತ್ತಡವಿತ್ತಾದರೂ ಕೊಟ್ಟಿರೋದು ಕೇವಲ ಒಬ್ಬರಿಗೆ ಎಂಬ ಮಾತುಗಳು ಕೇಳಿಬಂದಿವೆ.

ತನ್ವೀರ್​​ ಸೇಠ್​​ ಬೆಂಬಲಿಗರ ಪ್ರತಿಭಟನೆ

ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್​ ಸೇಠ್​​ಗೆ ಈ ಬಾರಿಯೂ ನಿರಾಸೆಯಾಗಿದ್ದು, ಹೈಕಮಾಂಡ್​​ ಪಟ್ಟಿಯಲ್ಲಿ ಅವರ ಹೆಸರಿಲ್ಲ. ಹೀಗಾಗಿ ಶಾಸಕರ ಬೆಂಬಲಿಗರು ಸಿಟ್ಟಾಗಿದ್ದು, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ನಿರಾಸೆ ಆಗಿದೆ ಎಂದು ತನ್ವೀರ್ ಸೇಠ್ ಕೂಡ ತಿಳಿಸಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಅವಕಾಶ ಸಿಕ್ಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:19 pm, Mon, 3 August 26

Follow Us
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ
ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ