AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದೆ. ಜುಲೈ 17ರ ಬಳಿಕ ಸಿಎಂ ಡಿಕೆ ದೆಹಲಿಗೆ ತೆರಳಲಿದ್ದು, ಈ ನಡುವೆ ಒಂದು ಸಚಿವ ಸ್ಥಾನಕ್ಕೆ 150 ಕೋಟಿ ರೂ. ಲಾಬಿ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಆಕಾಂಕ್ಷಿ ಶಾಸಕರಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಶುರುವಾಗಿದೆ.

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ
ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 15, 2026 | 7:50 AM

Share

ಮುಖ್ಯಾಂಶಗಳು

  • ಜುಲೈ 17ರ ನಂತರ ಸಿಎಂ ಡಿಕೆ ಸಂಪುಟ ವಿಸ್ತರಣೆಗೆ ದೆಹಲಿಗೆ ಪ್ರವಾಸ ಬೆಳೆಸಲಿದ್ದಾರೆ.
  • ಒಂದು ಸಚಿವ ಸ್ಥಾನಕ್ಕೆ 150 ಕೋಟಿ ಎಂದು ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ.
  • ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹಿನ್ನೆಲೆಯಲ್ಲಿ, ಇದೀಗ ಸಂಪುಟ ವಿಸ್ತರಣೆಯ ಲಾಬಿ ತೀವ್ರಗೊಂಡಿದೆ. ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ಹೈಕಮಾಂಡ್ ಒಪ್ಪಿಗೆ ಪಡೆಯಲು ನಾಯಕರು ಸಜ್ಜಾಗಿದ್ದಾರೆ. ಜುಲೈ 17ರ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಅಂತಿಮ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಹಲವು ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

‘ಒಂದು ಸಚಿವ ಸ್ಥಾನಕ್ಕೆ 150 ಕೋಟಿ’: ಆರ್.ಅಶೋಕ್ ಗಂಭೀರ ಆರೋಪ

ಕಾಂಗ್ರೆಸ್‌ನಲ್ಲಿನ ಈ ಸಂಪುಟ ಸರ್ಕಸ್ ಅನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮೊದಲ ಹಂತದಲ್ಲಿ ಅಸಮಾಧಾನಗೊಂಡವರಿಗೆ ಫೈಟಿಂಗ್ ಕೋಟಾ ಅಡಿ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈಗ ನಡೆಯುತ್ತಿರುವುದು ಪೇಮೆಂಟ್ ಕೋಟಾ. ಒಂದು ಸಚಿವ ಸ್ಥಾನಕ್ಕೆ 100 ರಿಂದ 150 ಕೋಟಿ ರೂ. ಬೇಡಿಕೆ ಇಡಲಾಗಿದೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಈ ಆರೋಪಗಳ ನಡುವೆಯೂ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ

ಸಂಪುಟ ವಿಸ್ತರಣೆ ರಾಕೆಟ್ ಸೈನ್ಸಾ? ಅಶೋಕ್ ಪ್ರಶ್ನೆ

ಆರ್. ಅಶೋಕ್ ಹೇಳುವಂತೆ, ಬಳ್ಳಾರಿಯಿಂದ ಭರತ್ ರೆಡ್ಡಿ ಯುವ ಕೋಟಾದಡಿ ಲಾಬಿ ನಡೆಸುತ್ತಿದ್ದರೆ, ನಾಗೇಂದ್ರ ಅವರು ಸಿದ್ದರಾಮಯ್ಯ ಮೂಲಕ ಹಾಗೂ ಜೆ.ಎನ್. ಗಣೇಶ್ ರೇಸ್‌ನಲ್ಲಿದ್ದಾರೆ. ಸಂಸದ ತುಕಾರಾಂ ತಮ್ಮ ಪತ್ನಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದಾರೆ. ಇತ್ತ ಬೆಳಗಾವಿ ಭಾಗದಿಂದ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಅಶೋಕ ಪಟ್ಟಣ ಸೇರಿದಂತೆ ಆರು ಶಾಸಕರು ನೇರವಾಗಿ ಬೇಡಿಕೆ ಇಟ್ಟಿದ್ದಾರೆ. ಈ ನಡುವೆ, ಕೃಷಿ ಸಚಿವರನ್ನು ತಕ್ಷಣ ನೇಮಿಸುವಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ‘ರಾಕೆಟ್ ಸೈನ್ಸ್’ ಆಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ