AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 5ಕ್ಕೆ; ನೂತನ ಸಚಿವರು ಯಾರ್ಯಾರು ಗೊತ್ತಾ? ಇಲ್ಲಿದೆ ಪಟ್ಟಿ

Karnataka Cabinet Expansion: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಂತೆ ಪ್ರಮುಖ ನಾಯಕರು ಸಂಪುಟ ಸೇರಲಿದ್ದು, ಸಚಿವ ಸ್ಥಾನಕ್ಕಾಗಿ ನಡೆದ ಸುದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ನೂತನ ಸಚಿವರ ಪಟ್ಟಿ ಇಲ್ಲಿದೆ.

ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 5ಕ್ಕೆ; ನೂತನ ಸಚಿವರು ಯಾರ್ಯಾರು ಗೊತ್ತಾ? ಇಲ್ಲಿದೆ ಪಟ್ಟಿ
ಸಚಿವ ಸಂಪುಟ ವಿಸ್ತರಣೆImage Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on:Aug 03, 2026 | 2:41 PM

Share

ಮುಖ್ಯಾಂಶಗಳು

  • ಇಂದು ಸಂಜೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ.
  • ಸಂಪುಟ ವಿಸ್ತರಣೆಯ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ.
  • ನೂತನ ಸಚಿವರಿಗೆ ಪ್ರಮಾಣವಚನ ಬೋಧನೆ

ಬೆಂಗಳೂರು, ಆಗಸ್ಟ್ 03: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಂದೆಡೆ ಕಾವೇರಿ ನದಿ ನೀರು ಹಂಚಿಕೆ ಹಾಗೂ ಪ್ರವಾಹದ ತೀವ್ರ ಸಂಕಷ್ಟ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಮತ್ತೊಂದೆಡೆ, ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಹಾಗೂ ದೆಹಲಿ ಮಟ್ಟದ ಸರಣಿ ಸಭೆಗಳು ಕೂಡ ಸಮಾನಾಂತರವಾಗಿ ತೀವ್ರ ಕುತೂಹಲ ಕೆರಳಿಸಿದ್ದವು. ಇದೀಗ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ತಂಗಿದ್ದು, ಇಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ.

ಶಾಸಕರ ನಡುವೆ ಭಾರೀ ಪೈಪೋಟಿ

ಹೈಕಮಾಂಡ್‌ ಅಂತಿಮಗೊಳಿಸಿದೆ ಎನ್ನಲಾಗುತ್ತಿರುವ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ನಾಯಕರ ಹೆಸರುಗಳು ತೀವ್ರ ಚರ್ಚೆಯಲ್ಲಿತ್ತು. ಇವರಲ್ಲಿ ಕೆಲವರು ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಮತ್ತೆ ಸಂಪುಟ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಜಿಲ್ಲಾವಾರು ಪ್ರಾತಿನಿಧ್ಯ, ಜಾತಿ ಸಮತೋಲನ ಹಾಗೂ ಭಿನ್ನಮತ ಶಮನಗೊಳಿಸುವ ವಿಚಾರದಲ್ಲಿ ಶಾಸಕರ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯಿಂದ ಲೋಕಭವನಕ್ಕೆ ಮೌಖಿಕ ಮಾಹಿತಿ ನೀಡಲಾಗಿದೆಯಾದರೂ, ಇದುವರೆಗೆ ಲಿಖಿತವಾಗಿ ಯಾವುದೇ ಅಧಿಕೃತ ಸೂಚನೆ ನೀಡಿಲ್ಲ ಎನ್ನಲಾಗಿತ್ತು. ಆದರೀಗ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ ಹೊರಬಿದ್ದಿದೆ.

ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ

    • ಪಿಎಂ ನಾರಾಯಣ ಸ್ವಾಮಿ
    • ಶಿವರಾಜ್ ತಂಗಡಗಿ
    • ರುದ್ರಪ್ಪ ಲಮಾಣಿ
    • ಟಿ. ರಘುಮೂರ್ತಿ
    • ಬಿ ನಾಗೇಂದ್ರ
    • ಜಮೀರ್
    • ರಿಜ್ವಾನ್ ಅರ್ಷದ್
    • ಸಂತೋಷ್ ಲಾಡ್
    • ಮಧು ಬಂಗಾರಪ್ಪ
    • ಪುಟ್ಟರಂಗ ಶೆಟ್ಟಿ
    • ಮಂಕಾಳ್ ವೈದ್ಯ
    • ಅಜಯ್ ಸಿಂಗ್
    • ಚೆಲುವರಾಯಸ್ವಾಮಿ
    • ಎಂ ಶಿವಲಿಂಗೇಗೌಡ
    • ಹೆಚ್‌ ಸಿ ಬಾಲಕೃಷ್ಣ
    • ಶಾಂತವೀರೇಗೌಡ
    • ವಿಜಯಾನಂದ ಕಾಶಪ್ಪನವರ್
    • ಲಕ್ಷ್ಮಣ್ ಸವದಿ
    • ಬಸವರಾಜ್ ರಾಯರೆಡ್ಡಿ

ಕೊನೆಗೂ ಸಂಪುಟ ವಿಸ್ತರಣೆಯ ಸುದೀರ್ಘ ಚರ್ಚೆಗಳಿಗೆ ತೆರೆ ಬಿದ್ದಿದ್ದು, ನೂತನ ಸಚಿವರ ಪ್ರಮಾಣವಚನದತ್ತ ಎಲ್ಲರ ಕಣ್ಣು ನೆಟ್ಟಿದೆ. ಹೊಸ ಸಚಿವರ ಅಧಿಕಾರ ಸ್ವೀಕಾರದ ನಂತರವಷ್ಟೇ ಖಾತೆ ಹಂಚಿಕೆ ಹಾಗೂ ರಾಜ್ಯದ ಆಡಳಿತ ಯಂತ್ರಕ್ಕೆ ಹೊಸ ವೇಗ ಸಿಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Mon, 3 August 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು