AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಅಲ್ಲ, 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣ: ಗಾಯತ್ರಿ ಶಾಂತೇಗೌಡ ಪಾಲಿಗೆ ಕೈಗೆ ಬಂದರೂ ಬಾಯಿಗೆ ಬಾರದ ತುತ್ತು!

Karnataka Cabinet Expansion:  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಮಹೂರ್ತದ ವೇಳೆಗೆ ಮತ್ತೊಂದು ಹೈಡ್ರಾಮಾ ನಡೆದಿದ್ದು, ಹೈಕಮಾಂಡ್ ಪ್ರಕಟಿಸಿದ್ದ 20 ಸಚಿವರ ಪಟ್ಟಿಯಲ್ಲಿದ್ದ ಏಕೈಕ ಮಹಿಳಾ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆ ಕ್ಷಣದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸುವ ಅವಕಾಶ ಕೈತಪ್ಪಿದೆ. ಇದರಿಂದಾಗಿ ಇಂದು ನಡೆದ ಸಮಾರಂಭದಲ್ಲಿ 20ರ ಬದಲಿಗೆ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

20 ಅಲ್ಲ, 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣ: ಗಾಯತ್ರಿ ಶಾಂತೇಗೌಡ ಪಾಲಿಗೆ ಕೈಗೆ ಬಂದರೂ ಬಾಯಿಗೆ ಬಾರದ ತುತ್ತು!
ಗಾಯತ್ರಿ ಶಾಂತೇಗೌಡImage Credit source: Tv9 Kannada
Pramod Shastri G
| Edited By: |

Updated on:Aug 03, 2026 | 6:59 PM

Share

ಮುಖ್ಯಾಂಶಗಳು

  • ಲಿಸ್ಟ್​​ನಲ್ಲಿ ಹೆಸರಿದ್ದರೂ ಗಾಯತ್ರಿ ಶಾಂತೇಗೌಡಗೆ ನಿರಾಸೆ
  • ಸಚಿವೆಯಾಗಿ ಪ್ರಮಾಣವಚನ ಸ್ವೀಕಾರ ಮಾಡದ ಗಾಯತ್ರಿ
  • 20ರ ಬದಲು 19 ಮಂದಿಯಿಂದ ಮಾತ್ರ ಪ್ರಮಾಣವಚನ

ಬೆಂಗಳೂರು, ಆಗಸ್ಟ್​​ 03: ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಮಂದಿ ಹೆಸರನ್ನು ಹೈಕಮಾಂಡ್​​ ಪ್ರಕಟಿಸಿತ್ತಾದರೂ 19 ಮಂದಿ ಮಾತ್ರ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲಿಸ್ಟ್​​ನಲ್ಲಿದ್ದವರ ಪೈಕಿ ಗಾಯತ್ರಿ ಶಾಂತೇಗೌಡ ಮಾತ್ರ ಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿಲ್ಲ. ಕೊನೇ ಕ್ಷಣದಲ್ಲಿ ನಡೆದ ದಿಢೀರ್​​ ರಾಜಕೀಯ ಬೆಳವಣಿಗೆಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಹಿಳಾ ಶಾಸಕರ ನಡುವಿನ ತೀವ್ರ ಪೈಪೋಟಿಯೇ ಇದಕ್ಕೆ ಕಾರಣ ಎನ್ನಲಾಗಿದೆ.

ಗಾಯತ್ರಿ ಶಾಂತೇಗೌಡಗೆ ತಪ್ಪಿದ ಅವಕಾಶ

ಹೌದು, 20 ಮಂದಿ ನೂತನ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರಿತ್ತು. ಆದರೆ ಪ್ರಮಾಣವಚನ ಸ್ವೀಕರಿಸಲು ಸಿಎಂ ಕಡೆಯಿಂದ ಅವರಿಗೆ ಯಾವುದೇ ಕರೆ ಬಂದಿಲ್ಲ. ಪರಿಷತ್ ಸದಸ್ಯೆಯಾಗಿ ಗಾಯತ್ರಿ ಇನ್ನೂ ಪ್ರಮಾಣ ಸ್ವೀಕರಿಸಿದ ಕಾರಣ ಪಕ್ಷದಲ್ಲಿ ಈ ಬಗ್ಗೆ ಅಸಮಾಧಾನ ಭುಗಿಲೆದ್ದ ಕಾರಣ, ಪಕ್ಷ ಈ ತೀರ್ಮಾನ ಕೈಗೊಂಡಿರುವ ಮಾಹಿತಿ ಇದೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ!

ಮಹಿಳಾ ಸಚಿವ ಸ್ಥಾನಕ್ಕಾಗಿ ಹಗ್ಗಜಗ್ಗಾಟ

ಮಹಿಳಾ ಸಚಿವ ಸ್ಥಾನಕ್ಕೆ ಗಾಯತ್ರಿ ಅವರ ಹೆಸರು ಘೋಷಣೆ ನಡುವೆಯೂ ಲಕ್ಷ್ಮೀ ಹೆಬ್ಬಾಳ್ಕರ್ ಉಮಾಶ್ರೀ ನಡುವೆ ತೀವ್ರ ಪೈಪೋಟಿ ನಡೆದಿದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಕೊನೆ ಕ್ಷಣದಲ್ಲಿ ಗಾಯತ್ರಿ ಹೆಸರು ಬಿಡಲೇಬೇಕು ಎಂಬ ರಾಜ್ಯ ನಾಯಕರ ಒತ್ತಡಕ್ಕೆ ಕಾಂಗ್ರೆಸ್ ವರಿಷ್ಠರು ಮಣಿದಿದ್ದಾರೆ. ಈ ನಡುವೆ ದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದ ಸಂಸದ ಇ.ತುಕಾರಾಂ ಪತ್ನಿ ಅನ್ನಪೂರ್ಣ ಪರ ಲಾಬಿ ನಡೆಸಿದ ಪ್ರಸಂಗವೂ ನಡೆದಿದೆ.

ಗಾಯತ್ರಿ ಶಾಂತೇಗೌಡ ಭಾವುಕ

ಸಿದ್ದರಾಮಯ್ಯ ಮುಂದೆ ಗಾಯತ್ರಿ ಶಾಂತೇಗೌಡ ಬೇಸರ ವ್ಯಕ್ತಪಡಿಸಿದ್ದು, ತಪ್ಪು ಮಾಡದಿದ್ದರೂ ಪರಿಷತ್ ಸ್ಥಾನದಲ್ಲೂ ತನಗೆ 4 ವರ್ಷ ಅನ್ಯಾಯ ಆಗಿದೆ. ಈಗ ಸಚಿವ ಸ್ಥಾನದ ವಿಚಾರದಲ್ಲಿಯೂ ಹೀಗಾಗಿದ್ದು, ಒಂದು ಅವಕಾಶ ನೀಡುವಂತೆ ಮನವಿ ಮಾಡಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:07 pm, Mon, 3 August 26

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ