ಬೆಂಗಳೂರು, ಆಗಸ್ಟ್ 10: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಬಿಬಿಎಂಪಿ (BBMP) ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಚರ್ಚೆ ನಡೆದಿದ್ದು, ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಕೆಲವು ಸಚಿವರು ಸೂಚಿಸಿದ್ದಾರೆ. ವಿಪಕ್ಷ ಬಿಜೆಪಿ ಆರೋಪದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ (D. K. Shivakumar), ಸಮಿತಿ ವರದಿ ಸಿಕ್ಕ ನಂತರವೇ ಬಿಡುಗಡೆ ಮಾಡಲಾಗುವುದು ಎಂದರು.
ಕಾಮಗಾರಿ ಪೂರ್ತಿಗೊಳಿಸಿದ ಗುತ್ತಿಗೆದಾರರಿಗೆ ಕೂಡಲೇ ಹಣ ಬಿಡುಗಡೆ ಮಾಡಿ. ಬಿಜೆಪಿ ನಾಯಕರು ಈ ವಿಚಾರವನ್ನೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ ಎಂದು ಕೆಲವು ಸಚಿವರು ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ.
ಈ ವೇಳೆ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿಯೂ ಆಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರ ಡಿ.ಕೆ.ಶಿವಕುಮಾರ್, ಅನೇಕ ಕಡೆ ಕಾಮಗಾರಿಗಳೇ ಅಗಿಲ್ಲ, ಬಿಲ್ ಹೇಗೆ ಕೊಡುವುದು ಎಂದು ಪ್ರಶ್ನಿಸಿದರು. ಅಲ್ಲದೆ, ಕಾಮಗಾರಿ ಆಗಿದೆಯಾ, ಇಲ್ಲವಾ ಅಂತಾ ತಿಳಿಯಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಬಿಲ್ ಬಿಡುಗಡೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ಇದನ್ನೂ ಓದಿ: ವಿವಾದದ ಸುಳಿವು; ಬಾರ್ ಕೌನ್ಸಿಲ್ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಿಂದ ಡಿಕೆ ಶಿವಕುಮಾರ್ ಹೆಸರು ತೆರವು
ಬಾಕಿ ಬಿಲ್ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ನನಗೆ ಗೊತ್ತಿದೆ. ಕಾಮಗಾರಿ ನಡೆದಿದೆಯಾ ಇಲ್ಲವಾ ಅಂತಾ ತನಿಖೆ ನಡೆಯುತ್ತಿದೆ. ನಂತರ ಎಲ್ಲವೂ ಹೊರಗೆ ಬರುತ್ತದೆ. ನಾವು 40 ಪರ್ಸೆಂಟ್ ಆರೋಪ ಮಾಡಿದ್ದಕ್ಕೆ 15 ಪರ್ಸೆಂಟ್ ಆರೋಪ ಮಾಡುತ್ತಿದ್ದಾರೆ. ಇದನ್ನು ರಾಜಕೀಯವಾಗಿಯೇ ಎದುರಿಸೋಣ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Thu, 10 August 23