AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಗುಡಿಸುವ ಯಂತ್ರಕ್ಕೆ ಕೋಟಿ ಕೋಟಿ ಬಾಡಿಗೆ: ರಾಜ್ಯ ಸರ್ಕಾರದಿಂದ ವಿವಾದಿತ ನಿರ್ಧಾರ

ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆಗಳ ಸ್ವಚ್ಛತೆಗಾಗಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷಗಳ ಅವಧಿಗೆ 613.25 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆಗೆ ಪಡೆಯಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿಗರುವ ಬಗ್ಗೆ ಸಚಿವ ಹೆಚ್​​.ಕೆ. ಪಾಟೀಲ್​ ತಿಳಿಸಿದ್ದಾರೆ.

ಕಸ ಗುಡಿಸುವ ಯಂತ್ರಕ್ಕೆ ಕೋಟಿ ಕೋಟಿ ಬಾಡಿಗೆ: ರಾಜ್ಯ ಸರ್ಕಾರದಿಂದ ವಿವಾದಿತ ನಿರ್ಧಾರ
ಸಚಿವ ಸಂಪುಟ ಸಭೆ (ಫೈಲ್​ ಫೋಟೋ)
ಪ್ರಸನ್ನ ಗಾಂವ್ಕರ್​
| Updated By: ಪ್ರಸನ್ನ ಹೆಗಡೆ|

Updated on:Nov 13, 2025 | 5:14 PM

Share

ಬೆಂಗಳೂರು, ನವೆಂಬರ್​ 13: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಾದಿತ ನಿರ್ಧಾರ ಕೈಗೊಳ್ಳಲಾಗಿದೆ. ಜಿಬಿಎ ವ್ಯಾಪ್ತಿಯ ಕಸ ಗುಡಿಸುವ ಯಂತ್ರಕ್ಕೆ ನೂರಾರು ಕೋಟಿ ಬಾಡಿಗೆ ನೀಡಲು ಸರ್ಕಾರ ಮುಂದಾಗಿದ್ದು, 7 ವರ್ಷದ ಅವಧಿಗೆ 46 ಕಸಗುಡಿಸುವ ಯಂತ್ರ ಬಾಡಿಗೆ ಪಡೆಯಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಭೆ ಬಳಿಕ ಸಚಿವ ಹೆಚ್​.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆ ಮತ್ತು ಉಪ ಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಕಸಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ನಿರ್ಧರಿಸಲಾಗಿದೆ. ಇದಕ್ಕಾಗಿ 613.25 ಕೋಟಿ ರೂ. ವೆಚ್ಚಕ್ಕೆ ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

3 ಸಂಪುಟ ಉಪ ಸಮಿತಿಗಳು 6 ತಿಂಗಳು ಆದ್ರೂ ವರದಿ ಸಲ್ಲಿಸಿದ ಕಾರಣ, ಆದಷ್ಟು ಬೇಗ ರಿಪೋರ್ಟ್ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋವಿಡ್ ಹಗರಣದ ಕುರಿತು ಕುನ್ಹಾ ವರದಿಯ ಪರಿಶೀಲನೆ ಉಪ ಸಮಿತಿ, ರಾಜ್ಯದ ವಿವಿಗಳ ಆರ್ಥಿಕ ಸ್ಥಿತಿಗಳ ಪರಿಶೀಲನೆಗೆ ನೇಮಿಸಿರುವ ಡಿಸಿಎಂ ನೇತೃತ್ವದ ಉಪ ಸಮಿತಿ ಮತ್ತು ನೈಸ್ ಕಾರಿಡಾರ್ ಯೋಜನೆಯ ಅನುಷ್ಠಾನ, ಮುಂದಿನ ಯೋಜನೆಯ ಪ್ರಗತಿ ಬಗ್ಗೆ ಪರಮೇಶ್ವರ್ ನೇತೃತ್ವದ ಉಪಸಮಿತಿಗೆ ಈ ಬಗ್ಗೆ ತಿಳಿಸಲಾಗಿದೆ ಎಂದು ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ:  ಮೇಕೆದಾಟು ಯೋಜನೆ, ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ

ಡಿ. 8ರಿಂದ 19ರವರೆಗೆ ಬೆಳಗಾವಿ ಅಧಿವೇಶನ

ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ದಿನಾಂಕ ನಿಗದಿಪಡಿಸಲಾಗಿದೆ. ಡಿಸೆಂಬರ್ 8ರಿಂದ 19ರವರೆಗೆ ಬೆಳಗಾವಿ ಅಧಿವೇಶನ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಎಂ ಮತ್ತು ಡಿಸಿಎಂಗೆ ಅಭಿನಂದನೆ

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್​​ನಲ್ಲಿ ವಜಾ ಆಗಿದೆ. ಮುಂದಿನ ಹೆಜ್ಜೆ ಇಡುವುದಕ್ಕಾಗಿ ಇದು ಹಸಿರು ನಿಶಾನೆ ತೋರಿಸಿದಂತಾಗಿದೆ. ಹೀಗಾಗಿ ರಾಜಕೀಯ, ಕಾನೂನಾತ್ಮಕ ಹೋರಾಟ ನಡೆಸಿದ್ದಕ್ಕಾಗಿ ಸಿಎಂ ಮತ್ತು ಡಿಸಿಎಂಗೆ ಸಂಪುಟ ಅಭಿನಂದನೆ ಸಲ್ಲಿದೆ ಎಂದೂ ಹೆಚ್​​.ಕೆ. ಪಾಟೀಲ್​ ಈ ವೇಳೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:14 pm, Thu, 13 November 25