ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ?

Karnataka Cabinet Portfolio: ಕರ್ನಾಟಕದಲ್ಲಿ ಆಗಸ್ಟ್ 3ರಂದು ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಅಧಿವೇಶನ ಆರಂಭದ ಮುನ್ನಾದಿನ ಕಾಂಗ್ರೆಸ್ ಹೈಕಮಾಂಡ್ ಇಲಾಖಾವಾರು ಖಾತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದುರ ಮಾಹಿತಿ ಇಲ್ಲಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ?
ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್
Edited By:

Updated on: Aug 12, 2026 | 5:43 PM

ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಆಗಸ್ಟ್​​ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್​​ ಹೈಕಮಾಂಡ್​​, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದರೋದು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಅಧಿವೇಶನ ಆರಂಭದ ಮುನ್ನಾ ದಿನವೇ ನೂತನ ಸಚಿವರಿಗೆ ಇಲಾಖಾವಾರು ಜವಾಬ್ದಾರಿ ಹಂಚಿಕೆ ನಡೆದಿದೆ.

ಯಾರಿಗೆ ಯಾವ ಖಾತೆ?

Portfolios Allocated To Newly Inducted Karnataka Ministers | Cabinet Expansion | TV9 Ground Reportಯಾರಿಗೆ ಯಾವ ಖಾತೆ ಹಂಚಿಕೆ

  • ಜಮೀರ್ ಅಹ್ಮದ್ ಖಾನ್-ವಸತಿ
  • ರಾಮಲಿಂಗಾರೆಡ್ಡಿ-ಅರಣ್ಯ
  • ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ
  • ಲಕ್ಷ್ಮಣ ಸಂಗಪ್ಪ ಸವದಿ-ಸಹಕಾರ
  • ಶಿವರಾಜ ತಂಗಡಗಿ-ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ & ಸಂಸ್ಕೃತಿ
  • ಯು.ಟಿ.ಖಾದರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  • ಡಾ.ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ-ಬಿಟಿ
  • ಎನ್.ಚಲುವರಾಯಸ್ವಾಮಿ-ಜಲಸಂಪನ್ಮೂಲ ಇಲಾಖೆ
  • ಮಧು ಬಂಗಾರಪ್ಪ-ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ
  • ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ
  • ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ
  • ಕೆ.ಎಂ.ಶಿವಲಿಂಗೇಗೌಡ-ಅಬಕಾರಿ ಖಾತೆ
  • ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ
  • ವಿಜಯಾನಂದ ಕಾಶಪ್ಪನವರ್-ಸಣ್ಣ ಕೈಗಾರಿಕೆ
  • ಸಂತೋಷ್ ಎಸ್.ಲಾಡ್-ಕಾರ್ಮಿಕ ಇಲಾಖೆ,
  • ಕೆ.ಎಸ್​.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ
  • ರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಪೂರೈಕೆ ಇಲಾಖೆ
  • ಬಿ.ನಾಗೇಂದ್ರ-ಯೋಜನೆ & ಸಾಂಖ್ಯಿಕ ಇಲಾಖೆ
  • ಎಸ್.ಎಸ್.ಮಲ್ಲಿಕಾರ್ಜುನ-ಗಣಿ & ಭೂವಿಜ್ಞಾನ ಇಲಾಖೆ
  • ಹುಲಿಕಟ್ಟೆ ಚೆನ್ನಪ್ಪ ಬಾಲಕೃಷ್ಣ-ಪೌರಾಡಳಿತ ಖಾತೆ
  • ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ
  • ರುದ್ರಪ್ಪ ಮಾನಪ್ಪ ಲಮಾಣಿ-ಸಕ್ಕರೆ, ಜವಳಿ ಇಲಾಖೆ

ಸಚಿವ ಮುನಿಯಪ್ಪ ಖಾತೆ ಬದಲಾವಣೆ

ಸಚಿವ ಕೆ.ಹೆಚ್.ಮುನಿಯಪ್ಪ ಖಾತೆ ಬದಲಾವಣೆ ಮಾಡಲಾಗಿದ್ದು, ಸಮಾಜಕಲ್ಯಾಣ ಇಲಾಖೆಯ ಹೊಣೆ ನೀಡಲಾಗಿದ್ದೆ. ಈ ಹಿಂದೆ ಮುನಿಯಪ್ಪಗೆ ಆಹಾರ ಇಲಾಖೆ ನೀಡಲಾಗಿತ್ತು. ಈಗ ಆ ಖಾತೆಯನ್ನು ರಿಜ್ವಾನ್​​ ಅರ್ಷದ್​​ಗೆ ಹಂಚಿಕೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:28 am, Wed, 12 August 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us