AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ, ಮಂತ್ರಿಗಿರಿಗೂ ಹೆಚ್ಚಿದ ಲಾಬಿ

ಕರ್ನಾಟಕದಲ್ಲಿ ನೂತನ ಸಿಎಂ ಆಯ್ಕೆ ಬೆನ್ನಲ್ಲೇ ಡಿಸಿಎಂ ಹುದ್ದೆಗೆ ಭಾರಿ ಪೈಪೋಟಿ ಶುರುವಾಗಿದೆ. ದಲಿತ ಕೋಟಾದಡಿ ಜಿ. ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ರೇಸ್ ಆರಂಭವಾಗಿದ್ದು, ಸಚಿವ ಸ್ಥಾನಕ್ಕೂ ಲಾಬಿ ತೀವ್ರಗೊಂಡಿದೆ. ಈ ನಡುವೆ ಸಿದ್ದರಾಮಯ್ಯ ಕೆಲವರ ಹೆಸರನ್ನು ಹೈಕಮಾಂಡ್​​ಗೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ, ಮಂತ್ರಿಗಿರಿಗೂ ಹೆಚ್ಚಿದ ಲಾಬಿ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on:May 31, 2026 | 12:51 PM

Share

ಬೆಂಗಳೂರು, ಮೇ 31: ನೂತನ ಮುಖ್ಯಮಂತ್ರಿಯ ಆಯ್ಕೆ ಬೆನ್ನಲ್ಲಿಯೇ ಡಿಸಿಎಂ ಮತ್ತು ಸಚಿವ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ (Congress) ಪಾಳಯದಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಸ್ಥಾನಗಳ ವಿಚಾರದಲ್ಲಿ ಇನ್ನೂ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕ ಎಷ್ಟು ಡಿಸಿಎಂ, ಎಷ್ಟು ಸಚಿವರು ಅಂತಾ ತೀರ್ಮಾನ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ನಡುವೆಯೂ ಪಟ್ಟಕ್ಕಾಗಿ ಪೈಪೋಟಿ ನಡೆದಿದೆ. ಅದರಲ್ಲಿ ದಲಿತ ಕೋಟಾದಡಿ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ರೇಸ್​ ಶುರುವಾಗಿರುವ ಮಾಹಿತಿ ಲಭಿಸಿದೆ.

ಪರಮೇಶ್ವರ್​​- ಪ್ರಿಯಾಂಕ್​​ ಖರ್ಗೆ ನಡುವೆ ರೇಸ್​​

ದಲಿತ ಕೋಟಾದಡಿ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಿಯಾಂಕ್ ಖರ್ಗೆ ಹಾಗೂ ಡಾ.ಜಿ.ಪರಮೇಶ್ವರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಂಬಂಧ ಮೊನ್ನೆ ದೆಹಲಿಗೆ ತೆರಳಿದ್ದಾಗ ಪರಮೇಶ್ವರ್ ಹೈಕಮಾಡ್​​ ನಾಯಕರಿಗೆ ಒತ್ತಾಯ ಮಾಡಿ ಬಂದಿದ್ದಾರೆ. ಡಿಸಿಎಂ ಹುದ್ದೆ ಜೊತೆ ಪ್ರಮುಖ ಖಾತೆ ಕೊಡಿ ಎಂದು ಪರಮೇಶ್ವರ್ ಪಟ್ಟು ಹಿಡಿದಿದ್ದು, ಇಲ್ಲದಿದ್ದರೆ ಮಂತ್ರಿಸ್ಥಾನವೇ ಬೇಡ ಶಾಸಕನಾಗಿಯೇ ಇರುತ್ತೇನೆ ಎಂದು ತಮ್ಮ ನಿಲುವು ಪ್ರಕಟಿಸಿದ್ದಾರೆ. ಕಳೆದ ಬಾರಿ ನೀಡಿದ್ದ ಗೃಹ ಇಲಾಖೆಯೂ ಬೇಡ ಎಂದು ಅವರು ಹೇಳಿದ್ದು, ಎಐಸಿಸಿ ಅಧ್ಯಕ್ಷ ಖರ್ಗೆ ಬಳಿಯೇ ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಿಯಾಂಕ್​​ ಖರ್ಗೆ ಅವರ ಹೆಸರೂ ಡಿಸಿಎಂ ರೇಸ್​​ನಲ್ಲಿ ಕೇಳಿಬಂದಿರೋದು ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

ಸಿದ್ದರಾಮಯ್ಯರಿಂದ ಕೆಲವರ ಹೆಸರು ಶಿಫಾರಸ್ಸು

ಡಿಸಿಎಂ ಹುದ್ದೆ ಮಾತ್ರವಲ್ಲದೆ ಸಚಿವ ಸ್ಥಾನಕ್ಕಾಗಿಯೂ ಆಕಾಂಕ್ಷಿಗಳ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದವರು ಮತ್ತೆ ಸ್ಥಾನ ಗಿಟ್ಟಿಸುವ ಪ್ರಯತ್ನದಲ್ಲಿದ್ದರೆ, ಹಿರಿಯರಾಗಿಯೂ ಸ್ಥಾನ ಸಿಗದವರು ಕೂಡ ಲಾಬಿಗೆ ಇಳಿದಿದ್ದಾರೆ. ಕೆಲ ಹೊಸ ಶಾಸಕರೂ ಮಂತ್ರಿಗಿರಿ ಮೇಲೆ ಕಣ್ಣಿಟ್ಟಿರುವ ಕಾರಣ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ನಡುವೆ ಸಚಿವ ಸ್ಥಾನಕ್ಕೆ ಹೈಕಮಾಂಡ್​​ಗೆ ಕೆಲ ಹೆಸರುಗಳನ್ನು ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಅವರು ಯಾರ್ಯಾರು ಎಂಬುದರ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಯಾರ್ಯಾರ ಹೆಸರು ಶಿಫಾರಸ್ಸು?

ಎ.ಎಸ್. ಪೊನ್ನಣ್ಣ, ಶಿವರಾಜ್ ತಂಗಡಗಿ, ಪುಟ್ಟರಂಗ ಶೆಟ್ಟಿ, ಕೆ. ವೆಂಕಟೇಶ್, ಬಸವರಾಜ್ ರಾಯರೆಡ್ಡಿ, ಬಿ. ಕೆ. ಹರಿಪ್ರಸಾದ್, ಸಂತೋಷ್ ಲಾಡ್, ಹೆಚ್. ಸಿ. ಮಹದೇವಪ್ಪ, ಜಮೀರ್ ಅಹಮದ್ ಖಾನ್ ಹೆಸರುಗಳು ಸಿದ್ದರಾಮಯ್ಯ ಶಿಫಾರಸ್ಸು ಮಾಡಿರುವ ಪಟ್ಟಿಯಲ್ಲಿ ಇವೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:48 pm, Sun, 31 May 26

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ