ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ: ಗೃಹಕಚೇರಿಯಲ್ಲಿ ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್​ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ: ಗೃಹಕಚೇರಿಯಲ್ಲಿ ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 02, 2021 | 10:59 PM

ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್​ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ (ನ.3) ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ. ಕೊವಿಡ್-19 ನಿಯಂತ್ರಣ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಕಂದಾಯ ಸಚಿವರು, ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಕೆಐಎಬಿ ಕೊವಿಡ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ಹಾಜರಿಗೆ ಸೂಚನೆ ನೀಡಲಾಗಿದೆ.

ಸಭೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೂ ಹಾಜರಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಒಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ. ಕೊವಿಡ್ ಎದುರಿಸಿದ ರೀತಿಯಲ್ಲಿಯೇ ಒಮಿಕ್ರಾನ್ ಪರಿಸ್ಥಿತಿಯನ್ನೂ ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ವಿವರ ಸಿಕ್ಕಿಲ್ಲ. ನಮ್ಮ ಆರೋಗ್ಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ನಾನು ಚರ್ಚಿಸಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆಯಲು ಸೂಚಿಸಿದ್ದೇನೆ. ನಾಳೆ (ನ.3) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ತಜ್ಞರ ಜತೆ ತುರ್ತು ಸಭೆ ನಡೆಯಲಿದೆ. ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ನುಡಿದರು.

ಒಮಿಕ್ರಾನ್ ಪ್ರಕರಣಗಳ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರವು, ಕೊರೊನಾ ರೂಪಾಂತರದ ಸೋಂಕು ಪತ್ತೆಯಾಗಿರುವ ಇಬ್ಬರೂ ಕರ್ನಾಟಕದವರು ಎಂದಿದೆ. ಕೇಂದ್ರ ಸರ್ಕಾರದ ಪ್ರಮುಖರು ಮತ್ತು ತಜ್ಞರ ಜೊತೆ ಈ ಸಂಬಂಧ ಚರ್ಚೆ ಮಾಡಬೇಕಿದೆ. ಪೂರ್ಣ ವರದಿ ಬಂದ ಬಳಿಕ ಪರಿಸ್ಥಿತಿಯ ಯಥಾಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಲಭ್ಯವಾಗಲಿದೆ. ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ತಪಾಸಣೆ ಮತ್ತು ಕ್ವಾರಂಟೈನ್ ಬಗ್ಗೆ ಮತ್ತಷ್ಟು ಮಾಹಿತಿ ಪಡೆದುಕೊಳ್ಳುವ ಅವಶ್ಯಕತೆ ಇದೆ. ಈ ವಿಚಾರದ ಬಗ್ಗೆ ತಜ್ಞರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು. ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ನನ್ನ ಆತ್ಮೀಯರು. ಬೆಂಗಳೂರಿಗೆ ತೆರಳಿದ ಬಳಿಕ ಅವರೊಂದಿಗೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ಕೇರಳ: ಒಮಿಕ್ರಾನ್ ಆತಂಕದ ನಡುವೆಯೇ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಳ ಇದನ್ನೂ ಓದಿ: ನಾವು ಬಹುಬೇಗ ಒಮಿಕ್ರಾನ್ ಸೋಂಕು ಪತ್ತೆ ಹಚ್ಚಿದ್ದೇವೆ; ಆರೋಗ್ಯ ಸಚಿವ ಸುಧಾಕರ್

‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ