AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊರನಾಡು ಕನ್ನಡಿಗರು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 09, 2021 | 4:24 PM

Share

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರ ಜತೆ ಕನ್ನಡ ಭವನ ನಿರ್ಮಾಣಕ್ಕೆ (kannada bhavan in goa) 10 ಕೋಟಿ ರೂಪಾಯಿ (Karnataka government fund) ಮಂಜೂರು ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.

ಮುಖ್ಯಮಂತ್ರಿ ಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Karnataka CM Basavaraj Bommai government releases rupees 10 crores to kannada bhavan in goa2

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ವೇಳೆ ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Also Read: ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ (Karnataka CM Basavaraj Bommai government releases rupees 10 crores to kannada bhavan in goa)

Published On - 12:18 pm, Tue, 9 November 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?