AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿಯಿಂದ 6 ಗಂಟೆಯ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಸಿಎಂ 8.45ಕ್ಕೆ ಬೆಂಗಳೂರು ತಲುಪಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಆರ್.ಟಿ ನಗರ ನಿವಾಸದಿಂದ ಗೃಹ ಕೃಷ್ಣಾಗೆ ತೆರಳುತ್ತಾರೆ.

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: sandhya thejappa|

Updated on:May 01, 2022 | 11:16 AM

Share

ಬೆಂಗಳೂರು: ದೆಹಲಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮೇ 1) ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಒಂದು ದಿನದ ದೆಹಲಿ ಪ್ರವಾಸ ಮುಗಿಸಿ ಆರ್.ಟಿ ನಗರದ ನಿವಾಸಕ್ಕೆ ಬಂದಿದ್ದಾರೆ. ದೆಹಲಿಯಿಂದ 6 ಗಂಟೆಯ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಸಿಎಂ 8.45ಕ್ಕೆ ಬೆಂಗಳೂರು ತಲುಪಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಆರ್.ಟಿ ನಗರ ನಿವಾಸದಿಂದ ಗೃಹ ಕೃಷ್ಣಾಗೆ ತೆರಳುತ್ತಾರೆ. ನಂತರ ಸಿಎಂ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗಿಯಾಗುತ್ತಾರೆ.

ಮಧ್ಯಾಹ್ನ 1 ಗಂಟೆಗೆ ರಾಮಾನುಜ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಜಸ್ಟಿನ್ ಶ್ರೀ ಎಂ ರಾಮಕೃಷ್ಣ ಜನ್ಮ ದಿನಾಚರಣೆಯಲ್ಲಿ ಬೊಮ್ಮಾಯಿ ಪಾಲ್ಗೊಳ್ಳುತ್ತಾರೆ.

ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್​​ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡಿರುವ ಸಾಧ್ಯತೆಯಿದೆ. ಏಪ್ರಿಲ್​ 5ರಂದೂ ಬಸವರಾಜಬೊಮ್ಮಾಯಿ ದೆಹಲಿಗೆ ಹೋಗಿದ್ದರು. ಆಗಲೂ ಸಹ ಸಂಪುಟ ವಿಸ್ತರಣೆ ಮಾತುಗಳು ಮುನ್ನಲೆಗೆ ಬಂದಿದ್ದವು.

ಬಿಜೆಪಿ ಸರ್ಕಾರ ರಚಿಸಿದಾಗ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳಂತೂ ತುದಿಗಾಲಿನಲ್ಲಿ ನಿಂತಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೇಳಿಬರುತ್ತಿರುವುದು ಬಸನಗೌಡ ಪಾಟೀಲ್​ ಯತ್ನಾಳ್​, ಎಂಪಿ ರೇಣುಕಾಚಾರ್ಯ, ದತ್ತಾತ್ರೇಯ ಪಾಟೀಲ್​ ರೇವುರ್​, ಪಿ.ರಾಜೀವ್​, ಎಸ್​.ಎ.ರಾಮದಾಸ್​, ಪೂರ್ಣಿಮಾ, ಬಿ.ವೈ.ವಿಜಯೇಂದ್ರ, ತಿಪ್ಪಾರೆಡ್ಡಿ ಮತ್ತು ರಾಜೂಗೌಡರದ್ದು. ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಏರಲು ರಮೇಶ್ ಜಾರಕಿಹೊಳಿ ಕೂಡ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ; ರೇಪ್​ ಆ್ಯಂಡ್​ ಮರ್ಡರ್​ ಎಂದು ದೂರು ಕೊಟ್ಟ ಕುಟುಂಬ

ಭಾರತೀಯ ಸೇನೆಯ 2ನೇ ಅತ್ಯುನ್ನತ ಸ್ಥಾನಕ್ಕೇರಿದ ಬಿಎಸ್ ರಾಜು; ಹುಟ್ಟೂರು ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ

Published On - 11:10 am, Sun, 1 May 22

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್