ಬೆಂಗಳೂರು: ದೆಹಲಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮೇ 1) ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಒಂದು ದಿನದ ದೆಹಲಿ ಪ್ರವಾಸ ಮುಗಿಸಿ ಆರ್.ಟಿ ನಗರದ ನಿವಾಸಕ್ಕೆ ಬಂದಿದ್ದಾರೆ. ದೆಹಲಿಯಿಂದ 6 ಗಂಟೆಯ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಸಿಎಂ 8.45ಕ್ಕೆ ಬೆಂಗಳೂರು ತಲುಪಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಆರ್.ಟಿ ನಗರ ನಿವಾಸದಿಂದ ಗೃಹ ಕೃಷ್ಣಾಗೆ ತೆರಳುತ್ತಾರೆ. ನಂತರ ಸಿಎಂ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗಿಯಾಗುತ್ತಾರೆ.
ಮಧ್ಯಾಹ್ನ 1 ಗಂಟೆಗೆ ರಾಮಾನುಜ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಜಸ್ಟಿನ್ ಶ್ರೀ ಎಂ ರಾಮಕೃಷ್ಣ ಜನ್ಮ ದಿನಾಚರಣೆಯಲ್ಲಿ ಬೊಮ್ಮಾಯಿ ಪಾಲ್ಗೊಳ್ಳುತ್ತಾರೆ.
ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡಿರುವ ಸಾಧ್ಯತೆಯಿದೆ. ಏಪ್ರಿಲ್ 5ರಂದೂ ಬಸವರಾಜಬೊಮ್ಮಾಯಿ ದೆಹಲಿಗೆ ಹೋಗಿದ್ದರು. ಆಗಲೂ ಸಹ ಸಂಪುಟ ವಿಸ್ತರಣೆ ಮಾತುಗಳು ಮುನ್ನಲೆಗೆ ಬಂದಿದ್ದವು.
ಬಿಜೆಪಿ ಸರ್ಕಾರ ರಚಿಸಿದಾಗ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳಂತೂ ತುದಿಗಾಲಿನಲ್ಲಿ ನಿಂತಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೇಳಿಬರುತ್ತಿರುವುದು ಬಸನಗೌಡ ಪಾಟೀಲ್ ಯತ್ನಾಳ್, ಎಂಪಿ ರೇಣುಕಾಚಾರ್ಯ, ದತ್ತಾತ್ರೇಯ ಪಾಟೀಲ್ ರೇವುರ್, ಪಿ.ರಾಜೀವ್, ಎಸ್.ಎ.ರಾಮದಾಸ್, ಪೂರ್ಣಿಮಾ, ಬಿ.ವೈ.ವಿಜಯೇಂದ್ರ, ತಿಪ್ಪಾರೆಡ್ಡಿ ಮತ್ತು ರಾಜೂಗೌಡರದ್ದು. ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಏರಲು ರಮೇಶ್ ಜಾರಕಿಹೊಳಿ ಕೂಡ ಪ್ರಯತ್ನ ನಡೆಸಿದ್ದಾರೆ.
ಇದನ್ನೂ ಓದಿ
ಭಾರತೀಯ ಸೇನೆಯ 2ನೇ ಅತ್ಯುನ್ನತ ಸ್ಥಾನಕ್ಕೇರಿದ ಬಿಎಸ್ ರಾಜು; ಹುಟ್ಟೂರು ಚಿಕ್ಕಮಗಳೂರಿನಲ್ಲಿ ಸಂಭ್ರಮಾಚರಣೆ
Published On - 11:10 am, Sun, 1 May 22