AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು ಇಂದು ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ವೀಕ್ಷಣೆ ಬಳಿಕ ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ಆಯೇಷಾ ಬಾನು|

Updated on:Mar 13, 2022 | 10:42 PM

Share

ಬೆಂಗಳೂರು: 1990ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಹೆಣೆದಿರುವ ‘ದಿ ಕಾಶ್ಮೀರ್ ಫೈಲ್ಸ್’(The Kashmir Files) ಸಿನಿಮಾವು ತೆರೆ ಕಂಡ ಎರಡೇ ದಿನಕ್ಕೆ ಹಲವು ದಾಖಲೆಗಳನ್ನು ಬರೆದಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು ಇಂದು ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ್ದಾರೆ.

ಸಿನಿಮಾ ವೀಕ್ಷಣೆ ಬಳಿಕ ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾ ಇದಾದರಿಂದ ಪಕ್ಷದ ಸೂಚನೆ ಮೇರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಿನಿಮಾ ವೀಕ್ಷಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿ ಬಂದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಬಿಟ್ಟಿದ್ದಾರೆ. ಹೀಗಾಗಿಯೇ ಅಲ್ಲಿ ಆರ್ಟಿಕಲ್ 370 ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು. ಹೀಗಾಗಿ ನಾನು ಸಿನಿಮಾದ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ ನಾಳೆಯೇ ಅದೇಶ ಮಾಡುತ್ತೇನೆ ಎಂದರು. ಇನ್ನು ಕೇವಲ ಕರ್ನಾಟಕ ಮಾತ್ರವಲ್ಲದೆ ಗುಜರಾತ್, ಹರಿಯಾಣ, ಮಧ್ಯಪ್ರದೇಶದಲ್ಲೂ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

‘ದಿ ಕಾಶ್ಮೀರ್ ಫೈಲ್ಸ್’ ತಂಡಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತಂಡ ಶನಿವಾರ (ಮಾ.12) ಸಂಜೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಚಿತ್ರವನ್ನು ಹಾಗೂ ಚಿತ್ರತಂಡವನ್ನು ಶ್ಲಾಘಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತುಂಬ ಖುಷಿ ಆಯಿತು. ನಮ್ಮ ಸಿನಿಮಾ ಬಗ್ಗೆ ಅವರು ಹೇಳಿದ ಪ್ರಶಂಸೆಯ ಮಾತುಗಳಿಂದಾಗಿ ಈ ಭೇಟಿ ತುಂಬ ವಿಶೇಷವಾಯಿತು’ ಎಂದು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಭಾರತದ ಅತ್ಯಂತ ಸವಾಲಿನ ಸತ್ಯವನ್ನು ಇಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲು ಧೈರ್ಯ ತೋರಿಸಿದ್ದಾಗಿ ನಿಮಗೆ ಧನ್ಯವಾದಗಳು’ ಎಂದು ನಿರ್ಮಾಪಕರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: James: ‘ಅಪ್ಪುವನ್ನು ಹುಡುಕಿ ಹೋಗುತ್ತೇನೆ’ ಎಂದು ನೋವಿನ ಮಾತನ್ನಾಡಿದ ರಾಘಣ್ಣ; ತಬ್ಬಿ ಸಂತೈಸಿದ ಶಿವಣ್ಣ

630ರಿಂದ 2,000ಕ್ಕೇರಿದ ಸ್ಕ್ರೀನ್​ಗಳ ಸಂಖ್ಯೆ! ‘ದಿ ಕಾಶ್ಮೀರ್ ಫೈಲ್ಸ್’ ಎರಡನೇ ದಿನದ ಬಾಕ್ಸಾಫೀಸ್​ ಕಲೆಕ್ಷನ್ ಎಷ್ಟು ಗೊತ್ತಾ?

Published On - 10:24 pm, Sun, 13 March 22