BS Yediyurappa Resign: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಘೋಷಣೆ

BS Yediyurappa: 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.

BS Yediyurappa Resign: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಘೋಷಣೆ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Follow us
sandhya thejappa
| Updated By: Digi Tech Desk

Updated on:Jul 26, 2021 | 12:48 PM

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್​ವೈ ಹೇಳಿದ್ದಾರೆ. ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.

ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಭಾವುಕರಾಗಿ ಹೇಳಿದ ಬಿಎಸ್​ವೈ, ಸಿಎಂ ಆಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.

ಸಾಧನ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ನನ್ನ ಶಕ್ತಿ ಮೀರಿ ನನ್ನ ಕೆಲಸ ಮಾಡಿದ್ದೇನೆ. ಈಗ ತಾನೇ ಕೇಳಿದ್ದೀರಾ ಅನೇಕ ಮುಖಂಡರು ಅಭಿಮಾನದ ಮಾತುಗಳನ್ನಾಡಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ. ಆದರೆ ಪ್ರಧಾನಿ ಮೋದಿಯವರು ಪ್ರಾಮಾಣಿಕತೆಯಿಂದ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ

ಸಂಪುಟ ವಿಸ್ತರಣೆಗೆ ಕೇಂದ್ರವೂ ವಿಳಂಬ ಮಾಡಿತು; ಪ್ರವಾಹ ಬಂದು ಎಲ್ಲ ಕಡೆ ಹುಚ್ಚನಂತೆ ಸುತ್ತಾಡಬೇಕಾಯಿತು- ಯಡಿಯೂರಪ್ಪ

BJP ಸಾಧನಾ ಸಮಾವೇಶದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಕಣ್ಣೀರು

(Karnataka CM BS Yediyurappa Resigns; Cites health reason)

Published On - 12:01 pm, Mon, 26 July 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ