ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ. ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.
ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಭಾವುಕರಾಗಿ ಹೇಳಿದ ಬಿಎಸ್ವೈ, ಸಿಎಂ ಆಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.
ಸಾಧನ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ನನ್ನ ಶಕ್ತಿ ಮೀರಿ ನನ್ನ ಕೆಲಸ ಮಾಡಿದ್ದೇನೆ. ಈಗ ತಾನೇ ಕೇಳಿದ್ದೀರಾ ಅನೇಕ ಮುಖಂಡರು ಅಭಿಮಾನದ ಮಾತುಗಳನ್ನಾಡಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ. ಆದರೆ ಪ್ರಧಾನಿ ಮೋದಿಯವರು ಪ್ರಾಮಾಣಿಕತೆಯಿಂದ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ
ಸಂಪುಟ ವಿಸ್ತರಣೆಗೆ ಕೇಂದ್ರವೂ ವಿಳಂಬ ಮಾಡಿತು; ಪ್ರವಾಹ ಬಂದು ಎಲ್ಲ ಕಡೆ ಹುಚ್ಚನಂತೆ ಸುತ್ತಾಡಬೇಕಾಯಿತು- ಯಡಿಯೂರಪ್ಪ
BJP ಸಾಧನಾ ಸಮಾವೇಶದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಕಣ್ಣೀರು
(Karnataka CM BS Yediyurappa Resigns; Cites health reason)
Published On - 12:01 pm, Mon, 26 July 21