18ರಿಂದ 44 ವರ್ಷಗಳ ಕಾರ್ಮಿಕರಿಗೆ ಲಸಿಕೆ ವಿತರಣೆ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
Labourers Vaccine Drive: ಬೆಂಗಳೂರಿನಲ್ಲಿ ಕೊವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಆದರೆ ತುರ್ತು ಚಿಕಿತ್ಸೆಗೆ ಆಸ್ಪತ್ರೆಗಳ ಅವಶ್ಯಕತೆ ಇನ್ನೂ ಇದ್ದು, ಕೊವಿಡ್ ಸೋಲಿಸಲು ನಾವೆಲ್ಲಾ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು: 18-44 ವರ್ಷದೊಳಗಿನ ಕಾರ್ಮಿಕರಿಗೆ ಲಸಿಕೆ ವಿತರಿಸುವ ಕೊವಿಡ್ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಬಸನವಗುಡಿ ನ್ಯಾಷನಲ್ ಕಾಲೇಜು ಹಾಗೂ ಬಸವನಗುಡಿ ಮೆಟ್ರೋ ಸ್ಟೇಷನ್ ಬಳಿ ಚಾಲನೆ ನೀಡಿದರು. ಬೀದಿಬದಿ ವ್ಯಾಪಾರಿಗಳು ಮತ್ತು ಮೆಟ್ರೋ ನಿರ್ಮಾಣ ಕಾರ್ಮಿಕರು ಸೇರಿ ಕಾರ್ಮಿಕ ವರ್ಗಕ್ಕೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಉದ್ದೇಶದಿಂದ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಚಿವ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಶಾಸಕ ಉದಯ ಗರುಡಾಚಾರ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುನರುಜ್ಜೀವನಗೊಳಿಸಿದ ಜಯನಗರ ಸಾರ್ವಜನಿಕ ಆಸ್ಪತ್ರೆಯ ಸ್ಟೆಪ್‌ಡೌನ್ ಕೊವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು. ಸ್ಥಗಿತಗೊಂಡಿದ್ದ ಆಸ್ಪತ್ರೆ 8 ದಿನದಲ್ಲಿ ಪುನರುಜ್ಜೀವನಗೊಂಡಿದೆ. ಸರ್ಕಾರದೊಂದಿಗೆ ಎಲ್ಲಾ ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಹೀಗಾಗಿ ಬೆಂಗಳೂರಿನಲ್ಲಿ ಕೊವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಆದರೆ ತುರ್ತು ಚಿಕಿತ್ಸೆಗೆ ಆಸ್ಪತ್ರೆಗಳ ಅವಶ್ಯಕತೆ ಇನ್ನೂ ಇದ್ದು, ಕೊವಿಡ್ ಸೋಲಿಸಲು ನಾವೆಲ್ಲಾ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್
ಕೊವಿಡ್ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್
(Karnataka CM BS Yediyurappa started Covid vaccine drive to labourers in Bengaluru)