AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಸಂಸದರ ಜೊತೆಗಿನ ಸಭೆಯಲ್ಲಿ ಏನೆಲ್ಲ ಚರ್ಚೆ?: ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸಂಜೆ ರಾಜ್ಯದ ಸಂಸದರ ಮಹತ್ವದ ಸಭೆ ನಡೆಯಲಿದ್ದು, ಕಾವೇರಿ, ಮಹದಾಯಿ ಸೇರಿದಂತೆ ಬಾಕಿ ನೀರಾವರಿ ಯೋಜನೆಗಳು ಹಾಗೂ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದೆ. ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಪ್ರತಿಕ್ರಿಯಿಸಿರುವ ಡಿಕೆಶಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿಯೂ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದ ಸಂಸದರ ಜೊತೆಗಿನ ಸಭೆಯಲ್ಲಿ ಏನೆಲ್ಲ ಚರ್ಚೆ?: ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​
ಸಿಎಂ ಡಿಕೆ ಶಿವಕುಮಾರ್ Image Credit source: PTI
ಪ್ರಸನ್ನ ಹೆಗಡೆ
|

Updated on: Jul 27, 2026 | 11:59 AM

Share

ಬೆಂಗಳೂರು, ಜು. 27: ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಿರುವ ನಿಟ್ಟಿನಲ್ಲಿ ಕರ್ನಾಟಕದ (Karnataka) ಸಂಸತ್ ಸದಸ್ಯರನ್ನು ಇಂದು ಭೇಟಿ ಮಾಡುತ್ತಿರೋದಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ತಿಳಿಸಿದ್ದಾರೆ. ತಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದವರು ತಿಳಿಸಿದ್ದಾರೆ.

ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆ

ಸಂಸತ್ ಮುಂಗಾರು ಅಧಿವೇಶನ ಹಿನ್ನೆಲೆ ದೆಹಲಿಯಲ್ಲೇ ಇರುವ ರಾಜ್ಯದ ಸಂಸದರುಗಳ ಜೊತೆಗೆ ಸಂಜೆ 6.30ಕ್ಕೆ ಕರ್ನಾಟಕ ಭವನದಲ್ಲಿ ಸಿಎಂ ಡಿಕೆಶಿ ಸಭೆ ನಡೆಸಲಿದ್ದಾರೆ. ಈ ಸಂಬಂಧ ಕಾಂಗ್ರೆಸ್, ಬಿಜೆಪಿ, JDS ಸಂಸದರಿಗೆ ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದು, ರಾಜ್ಯದ ಬಾಕಿ ಉಳಿದಿರುವ ಯೋಜನೆಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ; 12ರಿಂದ 15 ಹೊಸ ಮುಖಗಳಿಗೆ ಮಣೆ?

ಸಚಿವ ಸಂಪುಟ ವಿಸ್ತರಣೆ ಯಾವಾಗ?

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಸಚಿವ ಸಂಪುಟ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯೆ ನೀಡಿದ್ದು, ಈ ವಾರದೊಳಗೆ ಕ್ಯಾಬಿನೆಟ್​​ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್