ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ (Karnataka CM) ಇಂದು ಮೇ.20 ಸಿದ್ದರಾಮಯ್ಯ (Siddaramaiah) ಪ್ರಮಾಣವಚನ ಸಮಾರಂಭ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುವ ಹಿನ್ನೆಲೆ ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲಿನ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ವಿದ್ಯರ್ಥಿಗಳು ಬೆಳಿಗ್ಗೆ 8.30ರ ಒಳಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವಂತೆ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ವಿದ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಮಾಣವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಒಂದು ವೇಳೆ ವಿದ್ಯಾರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಬೇಕು. ಪೊಲೀಸರು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡುತ್ತಾರೆ.
ವಿಠಲ್ ಮಲ್ಯ ರಸ್ತೆಯಲ್ಲಿನ ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು ಕಂಠೀರವ ಕ್ರೀಡಾಂಗಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಈ ಕೇಂದ್ರದಲ್ಲಿ ಸಿಇಟಿ ಬರೆಯುತ್ತಿರುವವರಿಗೆ ಮಾತ್ರ ಬೆಳಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ 592 ಪರೀಕ್ಷ ಕೇಂದ್ರಗಳಲ್ಲಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.
ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ,
ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ,
ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ
ಮಧ್ಯಾಹ್ನ 2.30ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮೇ 22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 2,084 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:50 am, Sat, 20 May 23