ದೆಹಲಿ ಪ್ರವಾಸದಲ್ಲಿದ್ದರೂ ಸಿಕ್ಕ ಸಮಯದಲ್ಲಿ ಪಂದ್ಯ ವೀಕ್ಷಿಸಿದ ಸಿಎಂ, ಭಾರತ ತಂಡಕ್ಕೆ ಸಚಿವ ಹೆಚ್ಡಿಕೆ ಅಭಿನಂದನೆ
ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸದ ನಡುವೆಯೂ ಸಿಕ್ಕ ಸಮಯದಲ್ಲಿ ಪಂದ್ಯ ವೀಕ್ಷಿಸಿ ಖುಷಿ ಪಟ್ಟಿದ್ದಾರೆ.
ಬೆಂಗಳೂರು, ಜೂನ್.30: ಟಿ-20 ವಿಶ್ವಕಪ್ನ (T20 World Cup) ರಣರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು ಸಿಕ್ಕಿದೆ. ಹರಿಣಗಳ ಕೈಯಿಂದ ಗೆಲುವು ಕಸಿದುಕೊಂಡ ಭಾರತ, 2ನೇ ಬಾರಿಗೆ ಟಿ20 ಕ್ರಿಕೆಟ್ ವಿಶ್ವಕಪ್ಗೆ ಮುತ್ತಿಟ್ಟಿದೆ. ಸಿಎಂ ಸಿದ್ದರಾಮಯ್ಯ (Siddaramaiah), ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸೇರಿದಂತೆ ಗಣ್ಯರು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅದರಲ್ಲೂ ದೆಹಲಿ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ನಮಗೆ ಸಿಕ್ಕ ಕೊಂಚ ಬಿಡುವಿನ ಸಮಯದಲ್ಲೂ ಪಂದ್ಯ ವೀಕ್ಷಿಸಿದ್ದು ಸಂತಸವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನ ಭಾರತ ಮಣಿಸಿ ಕ್ರಿಕೆಟ್ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಭಾರತ ಹೊರಹೊಮ್ಮಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಟೂರ್ನಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದ.ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.
ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ… pic.twitter.com/cjPR2VrLAj
— Siddaramaiah (@siddaramaiah) June 29, 2024
ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ತಮ್ಮ ದೆಹಲಿ ಪ್ರವಾಸದ ನಡುವೆಯೂ ಸಿಕ್ಕ ಕೊಂಚ ಸಮಯದಲ್ಲಿ ಪಂದ್ಯ ವೀಕ್ಷಿಸಿದ್ದು ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ದೆಹಲಿ ಪ್ರವಾಸದಿಂದ ನಾಡಿಗೆ ವಾಪಾಸಾಗುವ ವೇಳೆ ವಿಮಾನ ಏರುವ ಮೊದಲು ಸಿಕ್ಕ ಅಲ್ಪ ಸಮಯದಲ್ಲೇ ಭಾರತ – ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪೈನಲ್ ಪಂದ್ಯ ವೀಕ್ಷಿಸಿದೆ. ಸಂಘಟಿತ ಹೋರಾಟದ ಮೂಲಕ ಭಾರತ ವಿಶ್ವಕಪ್ ಗೆದ್ದುಬರಲಿ ಎಂದು ಮನದುಂಬಿ ಹಾರೈಸುತ್ತೇನೆ. #WorldCupFinal #worldcup2024 #INDvsSA2024 #INDvsSA pic.twitter.com/jGZScCoRy6
— Siddaramaiah (@siddaramaiah) June 29, 2024
ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ
ಇನ್ನು ಭಾರತ ಕ್ರಿಕೆಟ್ ತಂಡಕ್ಕೆ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡಕ್ಕೆ ಶುಭಾಶಯಗಳು ಮತ್ತು ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು. ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ಭಾರತ ಗೆದ್ದು ಬೀಗಿದೆ. ನಮ್ಮ ಹೆಮ್ಮೆಯ ತಂಡಕ್ಕೆ ಶುಭವಾಗಲಿ ಎಂದಿದ್ದಾರೆ.
An extraordinary victory!🇮🇳
Congratulations to the Indian team led by Rohit Sharma for their thrilling victory against South Africa in the T20 World Cup match. On behalf of all Indians, I extend heartfelt congratulations.
The final match, with its many exciting twists and… pic.twitter.com/w9nI0BpcPa
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2024
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:26 am, Sun, 30 June 24