ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆಗೈದವರನ್ನು 24 ಗಂಟೆಯಲ್ಲಿ ಬಂಧಿಸುತ್ತೇವೆ: ಸಿಎಂ ಯಡಿಯೂರಪ್ಪ

ನಮಗೆ ಗೊತ್ತಿರುವವರೇ ಇದನ್ನು ಮಾಡಿದ್ದಾರೆ. ತಂದೆ ಹತ್ಯೆ ಬಳಿಕ ನನ್ನನ್ನು ಏರಿಯಾದಿಂದ ದೂರ ಇಟ್ಟಿದ್ದರು. ಆದರೆ ಅವರು ಜನರೊಂದಿಗೆ ಅವರು ವಾರ್ಡ್‌ನಲ್ಲೇ ಉಳಿದಿದ್ದರು ಎಂದು ಮೃತ ರೇಖಾ ಕದಿರೇಶ್ ಅವರ ಕದಿರೇಶ್ ಮಗ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆಗೈದವರನ್ನು 24 ಗಂಟೆಯಲ್ಲಿ ಬಂಧಿಸುತ್ತೇವೆ: ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on:Jun 24, 2021 | 3:22 PM

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಜತೆ ಚರ್ಚಿಸಿದ್ದೇನೆ. ಕೂಡಲೇ ಕ್ರಮಕೈಗೊಳ್ಳುವಂತೆ ಕಮಿಷನರ್​ಗೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕದಿರೇಶ್ ಹತ್ಯೆ ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ. ಅವರೇ ರೇಖಾರನ್ನು ಹತ್ಯೆ ಮಾಡಿರುವ ಅನುಮಾನವಿದೆ. ಏನೇ ಆದರೂ ರೇಖಾ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಯಿ ಸಾವಿನ ಸುದ್ದಿಯನ್ನು ಕೇಳಿ ನನಗೆ ಭಯ ಆಯಿತು. ಇಂದು ನಮ್ಮ ಸಂಬಂಧಿ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದರು. ಪೀಟರ್ ಎಂಬುವರು ಅಮ್ಮನ ಕತ್ತಿನ ಭಾಗಕ್ಕೆ ಹೊಡೆದಿದ್ದಾರೆ. ಪೀಟರ್ ನಮ್ಮ ಹತ್ತಿರದ ಸಂಬಂಧಿಯೂ ಆಗಬೇಕು. ನಮ್ಮ ತಂದೆ ಜೊತೆಯೂ ಪೀಟರ್ ಒಡನಾಟ ಹೊಂದಿದ್ದರು. ನಮಗೆ ಗೊತ್ತಿರುವವರೇ ಇದನ್ನು ಮಾಡಿದ್ದಾರೆ. ತಂದೆ ಹತ್ಯೆ ಬಳಿಕ ನನ್ನನ್ನು ಏರಿಯಾದಿಂದ ದೂರ ಇಟ್ಟಿದ್ದರು. ಆದರೆ ಅವರು ಜನರೊಂದಿಗೆ ಅವರು ವಾರ್ಡ್‌ನಲ್ಲೇ ಉಳಿದಿದ್ದರು ಎಂದು ಮೃತ ರೇಖಾ ಕದಿರೇಶ್ ಅವರ ಕದಿರೇಶ್ ಮಗ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ನನ್ನ ಜತೆ ಆತ್ಮೀಯರಾಗಿದ್ದರು. ರೇಖಾ ನನಗೆ ಸ್ವಂತ ತಂಗಿಗಿಂತ ಹೆಚ್ಚಾಗಿದ್ದರು. ರೇಖಾ ಕದಿರೇಶ್ ಸಾವಿನಿಂದ ನನಗೆ ಬಹಳ ನೋವಾಗಿದೆ. ಬಿಜೆಪಿಯವರು ಏನೇ ಆದರೂ ಆರೋಪ ಮಾಡುತ್ತಾರೆ. ನನ್ನ ಮೇಲೆ ಆರೋಪ ಮಾಡುತ್ತಾರೆ. ಕಳೆದ ಬಾರಿ ಕದಿರೇಶ್ ಹತ್ಯೆಯಾದಾಗಲೂ ಆರೋಪಿಸಿದ್ದರು. ರೇಖಾ ನಿಧನದಿಂದ ನನಗೆ ತುಂಬಾ ನೋವಾಗಿದೆ. ಬಿಜೆಪಿಯವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸತ್ಯದ ಪರ ದನಿ ಎತ್ತಿದ್ದಕ್ಕೆ ಟಾರ್ಗೆಟ್ ಮಾಡಿದ್ದಾರೆ ಎಂದು ಅವರು ಸಂತಾಪ ಸೂಚಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದರು.

ಸದ್ಯ ಕಿಮ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ರೇಖಾ ಕದಿರೇಶ್ ಅವರ ಮೃತದೇಹವನ್ನು ಇಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸ್​ ಪ್ರಕ್ರಿಯೆಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಕೆಲಸ ಮುಂದುವರಿದಿದೆ. ಪ್ರಕ್ರಿಯೆಗಳು ಮುಗಿದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ:Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Karnataka Politics: ಸಚಿವ ಸಿ ಪಿ ಯೊಗೇಶ್ವರ್​ಗೆ ಕೋಲಾರ ಜಿಲ್ಲೆಯ ಉಸ್ತುವಾರಿ ಜವಾಬ್ಧಾರಿ ಘೋಷಿಸಿದ ಸಿಎಂ ಯಡಿಯೂರಪ್ಪ

(Karnataka CM Yediyurappa says will arrest one who murder Former BBMP member Rekha Kadiresh in 24 hours)

Published On - 3:14 pm, Thu, 24 June 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್