AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಕರ್ನಾಟಕದಲ್ಲಿ ವಾಣಿಜ್ಯ LPG ಅನಿಲದ ತೀವ್ರ ಕೊರತೆಯಿಂದ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ಮೋದಿಗೆ ಪತ್ರ ಬರೆದು, ಸಿಲಿಂಡರ್ ಪೂರೈಕೆ ಕಡಿತ ಮತ್ತು ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ಆಗಿರುವ ನಷ್ಟವನ್ನು ವಿವರಿಸಿದ್ದಾರೆ. ತಕ್ಷಣದ ಪರಿಹಾರ, ಮಹಿಳಾ ಉದ್ಯಮಿಗಳಿಗೆ ವಿಶೇಷ ಆದ್ಯತೆ, ಹಾಗೂ ಸಬ್ಸಿಡಿ ನೀಡಲು ಅವರು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರಿನಲ್ಲಿ LPG ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಭಾವನಾ ಹೆಗಡೆ
|

Updated on: Mar 14, 2026 | 12:24 PM

Share

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ತಿಳಿಸಿದ್ದಾರೆ. ಸಿಲಿಂಡರ್ ಪೂರೈಕೆಯಲ್ಲಿ ಶೇ50ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್‌ಗಳನ್ನು ನಡೆಸುವುದು ಕಷ್ಟವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ Hotel Close: ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಸಣ್ಣ ಹೋಟೆಲ್‌ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಿ

ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆಯ ಪರಿಣಾಮ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಈ ಉದ್ಯಮವನ್ನು ನಂಬಿ ಬದುಕುತ್ತಿರುವ ಸಾವಿರಾರು ಮಹಿಳಾ ಕಾರ್ಮಿಕರ ಜೀವನೋಪಾಯಕ್ಕೂ ಹೊಡೆತ ಬಿದ್ದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್‌ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಹಾಗೂ ಸಣ್ಣ ಹೋಟೆಲ್‌ಗಳಿಗೆ ಸಬ್ಸಿಡಿ ಅಥವಾ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ ಟಿವಿ9 , ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​