ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

ಈಗಾಗಲೇ ರಾಹುಲ್ ಗಾಂಧಿಗೆ ಹಿರಿಯ ನಾಯಕರು ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಕೇರಳ ಪ್ರವಾಸದ ವೇಳೆಯೂ ರಾಹುಲ್ ಭೇಟಿಯಾಗಿ ರಾಜ್ಯ ಕಾಂಗ್ರೆಸ್ ಸ್ಥಿತಿಗತಿ ಬಗ್ಗೆ ನಾಯಕರು ವಿವರಿಸಿದ್ದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಬೇಕು.

ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಹೆಚ್ಚು ಕಡಿಮೆ ಎರಡು ವರ್ಷವಿದೆ. ಆದರೆ ರಾಜ್ಯ ಕಾಂಗ್ರೆಸ್​ನಲ್ಲಿ ಸಿಎಂ ವಿಚಾರದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದೆ. ಸಿಎಂ ವಿಚಾರ ಪ್ರಸ್ತಾಪಿಸದಂತೆ ಕೈ ನಾಯಕರಿಗೆ ಖಡಕ್ ಸೂಚನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿರಿಯ ನಾಯಕರು ಒತ್ತಾಯಿಸಿದ್ದಾರೆ. ಅಲ್ಲದೆ ಇಬ್ಬರು ನಾಯಕರನ್ನ ಕರೆದು ಮಾತುಕತೆ ಮಾಡುವಂತೆ ಮನವಿ ಮಾಡಿದ್ದಾರೆ.

ಈಗಾಗಲೇ ರಾಹುಲ್ ಗಾಂಧಿಗೆ ಹಿರಿಯ ನಾಯಕರು ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಕೇರಳ ಪ್ರವಾಸದ ವೇಳೆಯೂ ರಾಹುಲ್ ಭೇಟಿಯಾಗಿ ರಾಜ್ಯ ಕಾಂಗ್ರೆಸ್ ಸ್ಥಿತಿಗತಿ ಬಗ್ಗೆ ನಾಯಕರು ವಿವರಿಸಿದ್ದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಬೇಕು. ಪಕ್ಷ ಅಧಿಕಾರಕ್ಕೆ ತರಲು ಒಟ್ಟಾಗಿ, ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ನಾಯಕರು ಮನವಿ ಮಾಡಿದ್ದರು.

ಕೇರಳ ಚುನಾವಣೆ ಮುಗಿದ ಬಳಿಕ ಇಬ್ಬರು ನಾಯಕರನ್ನು ಕರೆದು ಮಾತನಾಡುವುದಾಗಿ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಹೇಳಿದ್ದರು. ಈಗ ಮತ್ತೆ ಸಿಎಂ ಹೇಳಿಕೆ ಗಲಾಟೆ ಹೆಚ್ಚಾಗಿರುವ ಹಿನ್ನೆಲೆ ಮೂಲ ಕಾಂಗ್ರೆಸ್ಸಿಗರು ರಾಹುಲ್ ಮೊರೆ ಹೋಗಿದ್ದಾರೆ. ಶೀಘ್ರದಲ್ಲಿಯೇ ಕರೆಸಿ ಡಿ.ಕೆ.ಶಿವಕುಮಾರ್, ಮತ್ತು ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇನೆ ಎಂದು ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಭರವಸೆ ನೀಡಿದ್ದಾರೆ.

ದೆಹಲಿಗೆ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಾರ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಕೊರೊನಾ ಹೆಚ್ಚಾದ ಬಳಿಕ ದೆಹಲಿ ನಾಯಕರ ಭೇಟಿಗೆ ತೆರಳದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ದೆಹಲಿಗೆ ಬರುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಗಲಾಟೆ ಆರಂಭವಾದ ಹಿನ್ನೆಲೆ ಹೈಕಮಾಂಡ್ ಕರೆಯುವುದಕ್ಕೂ ಮುನ್ನ ಸಿದ್ದರಾಮಯ್ಯ ದೆಹಲಿಗೆ ತೆರಳಿ ವಿವರಣೆ ನೀಡುವ ಸಾಧ್ಯತೆಯಿದೆ.

ನನಗೂ ಶಾಸಕರ ಹೇಳಿಕೆಗೂ ಸಂಬಂಧವಿಲ್ಲ; ಸಿದ್ದರಾಮಯ್ಯ
ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಶಾಸಕರ ಹೇಳಿಕೆಗೆ ನಾನೇನೂ ಮಾಡುವುದಕ್ಕೆ ಆಗುವುದಿಲ್ಲ. ನನಗೂ ಶಾಸಕರ ಹೇಳಿಕೆಗೂ ಸಂಬಂಧವಿಲ್ಲ ಎಂದಿದ್ದಾರೆ. ಶಾಸಕರ ಮೇಲೆ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ತಾರೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರೇನೋ ಹೇಳಿದ್ರೆ ನಾನೇನು ಮಾಡೋಕೆ ಆಗುತ್ತೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ

ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ

(Karnataka Congress Fight Senior leaders urges Rahul Gandhi to pass a strong message to rebels)