ಆರ್​ಎಸ್​ಎಸ್​ಗೆ ಜಮೀನು ಹಸ್ತಾಂತರಕ್ಕೆ ತಡೆ, ಸದನದಲ್ಲಿ ಮಾಹಿತಿ ನೀಡಿದ ಕೃಷ್ಣಬೈರೇಗೌಡ

ಆರ್.ಎಸ್.ಎಸ್ ಗೆ ನೀಡಿದ್ದ ಜಾಗಕ್ಕೆ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಶಾಸಕ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತಿರಿಸುವ ಮೂ;ಲಕ ಸ್ಪಷ್ಟಪಡಿಸಿದ್ದಾರೆ.

ಆರ್​ಎಸ್​ಎಸ್​ಗೆ ಜಮೀನು ಹಸ್ತಾಂತರಕ್ಕೆ ತಡೆ, ಸದನದಲ್ಲಿ ಮಾಹಿತಿ ನೀಡಿದ ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2023 | 11:40 AM

ಬೆಂಗಳೂರು, ಜುಲೈ 14: ಆರ್​ಆರ್​ಎಸ್​ಗೆ (Rashtriya Swayamsevak Sangh) ಕಾಂಗ್ರೆಸ್​  (Congress) ಸರ್ಕಾರ ಬಿಗ್ ಶಾಕ್ ನೀಡಿದೆ. ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ಹಸ್ತಾಂತರಕ್ಕೆ ಸಿದ್ದರಾಮಯ್ಯ ಸರ್ಕಾರ ತಡೆಹಿಡಿದಿದೆ. ಬೆಂಗಳೂರಿನ ತಾವರಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್​ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದ್ರೆ, ಇದೀಗ ಕಾಂಗ್ರೆಸ್​ ಸರ್ಕಾರ ತಡೆ ಹಿಡಿದಿದೆ. ಈ ಬಗ್ಗೆ ಇಂದು (ಜುಲೈ 14) ಸದನದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಲಿಖಿತ ಉತ್ತರ ನೀಡಿದರು.

ಇದನ್ನೂ ಓದಿ: ನೆಮ್ಮದಿ, ಶಾಂತಿ ಕೆಡಿಸಿದ್ರೆ ಆರ್​ಎಸ್​ಎಸ್​, ಭಜರಂಗದಳ ಯಾವ ಸಂಘಟನೆಯೆಂದು ನೋಡದೇ ಕ್ರಮ ಕೈಗೊಳ್ಳುತ್ತೇವೆ -ಪ್ರಿಯಾಂಕ್ ಖರ್ಗೆ

ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ-ಸಂಸ್ಥೆಗಳಿಗೆ ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಸೋಮಶೇಖರ್​ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್​ಗೆ ನೀಡಲಾಗಿದ್ದ 35 ಎಕರೆ 33 ಗುಂಟೆ ಭೂಮಿಯನ್ನು ತಡೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್​ ಸರ್ಕಾರ ಬಂದ ಒಂದೇ ವಾರಕ್ಕೆ ಭೂಮಿ ಹಸ್ತಾಂತರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅಲ್ಲದೇ ಇದೀಗ ಬಿಜೆಪಿಯ ಮಂಜೂರಾತಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು, ಇದೀಗ ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಿಖಿತ ಮಾಹಿತಿ ನೀಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಇದು ಈಗ ತಾನೇ ಆರಂಭವಾಗಿದ್ದು, ಈ ಸರ್ಕಾರ ಯಾವ ಹಾದಿಯಲ್ಲಿ ನಡೆಯುತ್ತೆ ಎಂದು ಗೊತ್ತಾಗುತ್ತಿದೆ. ನ್ಯಾಯಬದ್ಧವಾಗಿ ಜನಸೇವಾ ವಿದ್ಯಾಕೇಂದ್ರ ಕೆಲಸ ಮಾಡುತ್ತಿದೆ. ನಾನು ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ ಎಂದರು.

ಹಿಂದಿನ ಸರ್ಕಾರದ ಯೋಜನೆಗಳನ್ನು ತಡೆ ಹಿಡಿಯುತ್ತಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ರೂ. ನೀಡುತ್ತಿದೆ. ರಾಜ್ಯದಲ್ಲಿ ಸಿಎಂ ಆಗಿದ್ದಾಗ ಬಿಎಸ್​ವೈ 4 ಸಾವಿರ ರೂ. ಕೊಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಈಗ ರೈತರ ಯೋಜನೆಗೂ ಕಲ್ಲು ಹಾಕಿದೆ. ಬೊಮ್ಮಾಯಿ ಸರ್ಕಾರ ತಂದಿದ್ದ ರೈತ ವಿದ್ಯಾನಿಧಿ ನಿಲ್ಲಿಸಲಾಗಿದೆ ಎಂದು ಕಿಡಿಕಾರಿದರು.

ಕಳೆದ ಸೆಪ್ಟೆಂಬರ್​ನಲ್ಲಿ ಓ ಗೋಮಾಣ ಭೂಮಿಯನ್ನು ಅಂದಿನ ಬಿಜೆಪಿ ಸರ್ಕಾರ ಜನಸೇವಾ ಟ್ರಸ್ಟ್​ಗೆ ಮಂಜೂರು ಮಾಡಿತ್ತು. 2023ರ ಮೇನಲ್ಲಿ ಜಿಲ್ಲಾಧಿಕಾರಿ ಸಹ ಜನಸೇವಾ ಟ್ರಸ್ಟ್​ಗೆ ಜಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಆದ್ರೆ,ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರಿವಹಿಸಿಕೊಂಡ ನಂತರ ಈ ಜಮೀನು ಹಸ್ತಾಂತರಕ್ಕೆ ತಡೆ ಹಿಡಿಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಲ್ಲದೇ ಮಂಜುರಾತಿ ಆದೇಶ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯನವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:17 am, Fri, 14 July 23

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು