Indira Canteen: ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ರೋಟಿ-ಕರಿ ಭಾಗ್ಯ

ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ. ಅಲ್ಲದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಕ್ಯಾಂಟೀನ್ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ.

Indira Canteen: ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ರೋಟಿ-ಕರಿ ಭಾಗ್ಯ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
Follow us
ರಮೇಶ್ ಬಿ. ಜವಳಗೇರಾ
|

Updated on:May 25, 2023 | 1:37 PM

ಬೆಂಗಳೂರು: ಬಡವರಿಗೆ ಅತೀ ಕಡಿಮೆ ಬೆಲೆಯಲ್ಲಿ ಅನ್ನ ನೀಡುವ ರಾಜ್ಯದ ‘ಇಂದಿರಾ ಕ್ಯಾಂಟೀನ್​ಗೆ (Indira Canteen) ಕಾಂಗ್ರೆಸ್ ಸರ್ಕಾರ ಮರುಜೀವ ನೀಡಿದೆ. ಈ ಹಿಂದೆ ಬಿಜೆಪಿ ಸೆರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್​ ಅನ್ನು ಕಡೆಗಣಿಸಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕ್ಯಾಂಟೀನ್‌ಗಳಿಗೆ ಮತ್ತ ಮರುಜೀವ ಸಿಕ್ಕಿದ್ದು, ಈಗಾಗಲೇ ಬಿಬಿಎಂಪಿಯಿಂದ ಅಗತ್ಯ ಸಿದ್ಧತೆಗಳು ಆರಂಭವಾಗಿವೆ. ಇನ್ನು ಹೊಸ ಊಟದ ಮೆನುನೊಂದಿಗೆ ಬಡವರ ಫೈ ಸ್ಟಾರ್​ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ. ಹೌದು..​ ಕ್ಯಾಂಟಿನ್​ನಲ್ಲಿ ರಾಗಿ ಮುದ್ದೆ, ರೋಟಿ ಕರಿ ನೀಡಲು ಚಿಂತನೆ ನಡೆಸಿದೆ. ಹೀಗಾಗಿ ಅಗ್ಗದ ದರದಲ್ಲಿ ನಗರದ ಜನತೆಗೆ ಆಹಾರಗಳನ್ನು ಒದಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ ನಲ್ಲಿ ಇನ್ನು ಮುಂದೆ ಗ್ರಾಹಕರು ವೈವಿಧ್ಯ ಆಹಾರಗಳನ್ನು ಸವಿಯಬಹುದು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸರ್ಕಾರ ಸೂಚನೆ: ಮತ್ತೆ ತೆರೆಯಲಿದೆ ಬಡಜನರ ಸ್ಟಾರ್ ಹೋಟೆಲ್ ಬಾಗಿಲು

ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ, ಕಾಂಗ್ರೆಸ್ ಸರ್ಕಾರವು ಕ್ಯಾಂಟಿನ್​ನಲ್ಲಿ ರಾಗಿ ಮುದ್ದೆ, ರೋಟಿ ಕರಿ ನೀಡಲು ಚಿಂತನೆ ನಡೆಸಿದೆ. ಈ ಹಿಂದೆ ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ಉಪ್ಪಿಟ್ಟು, ರೈಸ್ ಬಾತ್ ನೀಡಲಾಗುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಅನ್ನ ಸಾಂಬರ್, ಮೊಸರನ್ನ ಇತ್ತು. ಇನ್ಮುಂದೆ ಇಂದಿರಾ ಕ್ಯಾಂಟೀನ್ ಕ್ಯಾಂಟೀನ್ ನಲ್ಲಿ ಮೆನುಗಳ ಸಂಖ್ಯೆ ಏರಿಕೆಯಾಗಲಿದೆ. ಮೆನುವಿನಲ್ಲಿ ರಾಗಿ ಮುದ್ದೆ, ರೋಟಿ ಕರಿ ಇರಲಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ ನೀಡಬೇಕು ಎಂದು ಅನೇಕರ ಬೇಡಿಕೆ ಆಗಿತ್ತು. ಅದರಂತೆ ಕೊನೆಗೂ ಸಿದ್ದರಾಮಯ್ಯನವರ ಸರ್ಕಾರ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದು, ಕ್ಯಾಂಟೀನ್​ನಲ್ಲಿ ರಾಗಿ ಮುದ್ದೆ, ಸೊಪ್ಪಿನ ಸಾರು ನೀಡಲು ಚಿಂತನೆ ನಡೆಸಿದೆ. ಹಾಲಿ ಕ್ಯಾಂಟೀನ್‌ಗಳ ಪುನಾರಂಭ ಜೊತೆಗೆ 243 ವಾರ್ಡ್‌ಗಳಿಗೂ ಕ್ಯಾಂಟೀನ್ ವಿಸ್ತರಣೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಆಹಾರದ ಪ್ರಮಾಣ (ಕ್ವಾಂಟಿಟಿ), ಗುಣಮಟ್ಟ ಹೆಚ್ಚಿಸಲಿದೆ. ಇದರಿಂದ ಬೆಲೆ ಸಹ 5-10 ರೂಪಾಯಿ ಹೆಚ್ಚಾಗಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಈ ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಟ್ಟು 247 ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಿತ್ತು. ಹಲವು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿತ್ತು. 5 ರೂ.ಗೆ ಉಪಹಾರ, 10 ರೂ.ಗೆ ಊಟವನ್ನು ನೀಡಲಾಗುತ್ತಿತ್ತು. ಆದ್ರೆ, ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂದೀರಾ ಕ್ಯಾಂಟೀನ್​ಗಳಿಗೆ ಬೀಗ ಬಿದ್ದಿತ್ತು. ಇದೀಗ ಮತ್ತೆ ಇಂದಿರಾ ಕ್ಯಾಂಟೀನ್ ಬಾಗಿಲು ತೆರೆಯಲಿದೆ.

Published On - 1:34 pm, Thu, 25 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ