AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಅಲಭ್ಯತೆ, ಅನುದಾನ ಕೊರತೆ, ಮತ್ತು ಅಧಿಕಾರಿಗಳಿಂದ ಕಿರುಕುಳದ ಕುರಿತು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪ ಮಾಡಿದ್ದು, . ಇದೇ ವಿಚಾರಕ್ಕೆ ನಾರಾಯಣಸ್ವಾಮಿ ಮತ್ತು ಶೃಂಗೇರಿ ಶಾಸಕ ರಾಜೇಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕದಲ್ಲೂ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!
ಕಾಂಗ್ರೆಸ್​​ ಸಿಎಲ್​ಪಿ ಸಭೆಯಲ್ಲಿ ಕಿತ್ತಾಟImage Credit source: Tv9 Kannada
ಪ್ರಮೋದ್​ ಶಾಸ್ತ್ರಿ ಜಿ.
| Edited By: |

Updated on: Mar 12, 2026 | 8:00 AM

Share

ಬೆಂಗಳೂರು, ಮಾರ್ಚ್​​ 12: ನಗರದ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು  ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್​​ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ.

ಶಾಸಕರ ನಡುವೆಯೇ ಕಿತ್ತಾಟ

ಸಭೆಯಲ್ಲಿ ಶಾಸಕರಾದ ಎಸ್‌.ಎನ್.ನಾರಾಯಣಸ್ವಾಮಿ ಹಾಗೂ ರಾಜೇಗೌಡ ನಡುವೆ ಭಾರಿ ವಾಗ್ವಾದ ನಡೆದಿದೆ. IAS ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್‌.ಎನ್.ನಾರಾಯಣಸ್ವಾಮಿ ಕಿಡಿ ಕಾರಿದ್ದು, ಪ್ರಭಾವಿಗಳ ಮಾತು ಕೇಳಿ ಕಿರುಕುಳ ಕೊಡುತ್ತಿದ್ದಾರೆ. ಪದೇಪದೆ ಟಾರ್ಗೆಟ್‌ ಮಾಡಿ ಭೂ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ನೋಟಿಸ್ ನೀಡುತ್ತಿದ್ದಾರೆ. ಇದೇ ರೀತಿ ಹತ್ತಾರು ಸಲ ನೋಟಿಸ್ ನೀಡಿದ್ದಾರೆ. ನೋಟಿಸ್‌ಗೆ ಉತ್ತರಿಸಿದರೂ ಕ್ಯಾರೆ ಅಂತಿಲ್ಲ. ನಾನು ಮೂರು ಸಲ ಶಾಸಕನಾಗಿದ್ದೇನೆ, ನನಗೆ ಹೀಗಾದರೆ ಏನು ಮಾಡಲಿ?  ಹೀಗಾಗಿ ಐಎಎಸ್‌ ಅಧಿಕಾರಿ ವಿರುದ್ಧ ಕ್ರಮ ಆಗಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ವೇಳೆನಾರಾಯಣಸ್ವಾಮಿ ಮಾತಿಗೆ ಶೃಂಗೇರಿ ಶಾಸಕ ರಾಜೇಗೌಡ ಟಾಂಗ್ ನೀಡಿದ್ದು, ರಾಜೇಂದ್ರ ಕುಮಾರ್ ಕಟಾರಿಯಾ ಒಳ್ಳೆಯ ಅಧಿಕಾರಿ ಎಂದಿದ್ದಾರೆ. ರಾಜೇಗೌಡ ಮಾತಿಗೆ ಕೆರಳಿದ ನಾರಾಯಣಸ್ವಾಮಿ ಏಯ್.. ನಿಮಗೇನ್ರಿ ಗೊತ್ತು ನೋವು? ನೋಟಿಸ್ ಕೊಟ್ಟಿರೋದು ನಿಮಗಾ? ಎಂದು ಪ್ರಶ್ನಿಸಿರೋದು ವಾಗ್ವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ; ಕಾರಣ ಇಲ್ಲಿದೆ

‘ನಮ್ಮ ಮರ್ಯಾದೆ ಏನಾಗಬೇಡ?’

ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿ, ಎಸ್‌ಪಿ ವಿಚಾರವೂ ಪ್ರಸ್ತಾಪವಾಗಿದೆ. ಜಿಲ್ಲೆಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿಗಳನ್ನು ನೇಮಿಸುವ ಸಂಬಂಧ ಸೌಜನ್ಯಕ್ಕೂ ಶಾಸಕರ ಬಳಿ ಒಂದು ಮಾತು ಕೇಳಲ್ಲ. ಸಚಿವರು, ಪ್ರಭಾವಿಗಳ ಮಾತು ಕೇಳಿ ವರ್ಗಾವಣೆ ಮಾಡಲಾಗುತ್ತೆ. ಕ್ಷೇತ್ರದಲ್ಲಿ ನಾವು ಹೇಳಿದ ಕೆಲಸಗಳೇ ಆಗಲ್ಲ. ವಿಪಕ್ಷದವರ ಕೆಲಸಗಳನ್ನ ಡಿಸಿ, ಎಸ್‌ಪಿಗಳು ಮಾಡಿಕೊಡುತ್ತಾರೆ. ಹೀಗಾದರೆ ಕ್ಷೇತ್ರದಲ್ಲಿ ನಮ್ಮ ಮರ್ಯಾದೆ ಏನಾಗಬೇಡ ಎಂದು ಕೆಲ ಶಾಸಕರು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!