AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ‘ಕೈ’ ಕೌಂಟರ್

Karnataka Congress Protest against Centre: ಒಂದೆಡೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದರೆ, ಮತ್ತೊಂದೆಡೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ಕೈ’ ನಾಯಕರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಹಾಗೂ ಎಲ್​ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಲಾಯಿತು.

ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ‘ಕೈ’ ಕೌಂಟರ್
ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಪ್ರಸನ್ನ ಗಾಂವ್ಕರ್​
| Edited By: |

Updated on: Apr 17, 2025 | 12:58 PM

Share

ಬೆಂಗಳೂರು, ಏಪ್ರಿಲ್ 17: ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ಪ್ರತಿಭಟನೆ (Congress Protest) ನಡೆಸಿದೆ. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ (freedom Park) ಕೇಂದ್ರದ ದರ ಏರಿಕೆ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.  ಸಿಲಿಂಡರ್ ದರ ಏರಿಕೆ (Cylinder Price Hike) ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿ ಕಾಂಗ್ರೆಸ್‌ನ ಘಟಾನುಘಟಿಗಳು ಬಿಜೆಪಿ ವಿರುದ್ಧ ಅಬ್ಬರಿಸಿದ್ದಾರೆ. ಇಂದಿನ ಬೆಲೆ ಏರಿಕೆಗೆ ಕೇಂದ್ರದ ನೀತಿಯೇ ಕಾರಣ ಎಂದು ಗುಡುಗಿದ್ದಾರೆ.

‘ಇಂಧನ ಧರ ಏರಿಕೆ: ಅಚ್ಚೇದಿನ್ ಮರೀಚಿಕೆ’

ಫ್ರೀಡಂ ಪಾರ್ಕ್‌ನಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಾಸಕರು, ಸಚಿವರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಭಾಗದಿಂದಲೂ ಕಾರ್ಯಕರ್ತರು ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು.

ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಸಿಲಿಂಡರ್ ದರ 413 ರೂಪಾಯಿ ಇತ್ತು. ಈಗ 850 ರೂಪಾಯಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಗುಡುಗಿದ್ದಾರೆ.

ಇದನ್ನೂ ಓದಿ
Image
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಲಾರಿ ಮುಷ್ಕರ ತೀವ್ರ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ

ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

ಇತ್ತ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಜೋರಾಗಿದ್ದರೆ, ಅತ್ತ ಬಾಗಲಕೋಟೆಯಲ್ಲಿ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಏಪ್ರಿಲ್ 7ರಂದು ಮೈಸೂರಿಂದ ಆರಂಭವಾಗಿರುವ ಯಾತ್ರೆ ಜಿಲ್ಲೆ ಜಿಲ್ಲೆಗಳಲ್ಲೂ ಸಾಗಿ, ಇದೀಗ ಬಾಗಲಕೋಟೆ ತಲುಪಿದೆ. ಬಾಗಲಕೋಟೆಯಲ್ಲಿ ಇವತ್ತು ತೆರೆದ ವಾಹನದಲ್ಲಿ ಯಾತ್ರೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

Siddaramaiah And Dk Shivakumar

ಫ್ರೀಡಂ ಪಾರ್ಕ್​ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಿಎಂ ಹಾಗೂ ಡಿಸಿಎಂ

ಬಿಜೆಪಿ ಜನಾಕ್ರೋಶಕ್ಕೆ ಕೊಪ್ಪಳದಲ್ಲಿ ವ್ಯಂಗ್ಯವಾಡಿರುವ ಸಚಿವ ಶಿವರಾಜ್ ತಂಗಡಗಿ, ಜನರು ಆಕ್ರೋಶಗೊಂಡು ಬಿಜೆಪಿಯನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಮೇಲೆ ಜನ ಆಕ್ರೋಶಗೊಂಡಿಲ್ಲ ಎಂದರು. ಇದಕ್ಕೆ ಬಿಸಿ ಪಾಟೀಲ್ ತಿರುಗೇಟು ಕೊಟ್ಟರು.

ಇದನ್ನೂ ಓದಿ: ಲಾರಿ ಮುಷ್ಕರ: ಇಂದಿನಿಂದ ಮತ್ತಷ್ಟು ತೀವ್ರ ಹೋರಾಟ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ

ಏತನ್ಮಧ್ಯೆ, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಲಾರಿ ಮುಷ್ಕರ ಮೂರನೇ ದಿನವೂ ಮುಂದುವರಿದಿದೆ. ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರು ಮಹತ್ವದ ಸಭೆ ಕರೆದಿದ್ದು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈಗಾಗಲೇ ಬೆಂಗಳೂರಿನ ಎಲ್ಲಾ ಮಾರ್ಕೆಟ್‌ಗಳಿಗೂ ಲಾರಿ ಸಂಚಾರ ಬಂದ್ ಆಗಿದ್ದು, ಅಕ್ಕಿ, ಬೇಳೆ ಸೇರಿ ಆಹಾರ ಧಾನ್ಯ ಸರಕು ಸಾಗಾಣೆ ಬಂದ್ ಆಗಿದೆ. ಕೆಲವು ಲಾರಿಗಳಷ್ಟೇ ಸರಕು ಸಾಗಾಟ ನಡೆಸುತ್ತಿದ್ದು, ಶೇಕಡಾ 80ರಷ್ಟು ಲಾರಿಗಳ ಸಂಚಾರ ಬಂದ್ ಆಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?