Covid 19 Karnataka Update: 402 ಮಂದಿಗೆ ಸೋಂಕು, 6 ಮಂದಿ ಸಾವು
ಕರ್ನಾಟಕದ ಸಾವಿನ ಪಾಸಿಟಿವಿಟಿ ಪ್ರಮಾಣ ಶೇ 0.60 ಆಗಿದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 1.49 ಇದೆ.
ಬೆಂಗಳೂರು: ಕರ್ನಾಟದಲ್ಲಿ ಶುಕ್ರವಾರ 402 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 6 ಮಂದಿ ಸಾವನ್ನಪ್ಪಿದ್ದಾರೆ. 277 ಜನರು ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 6611 ಸಕ್ರಿಯ ಸೋಂಕು ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ 0.60 ಆಗಿದ್ದು, ಸೋಂಕಿತರ ಸಾವಿನ ಪ್ರಮಾಣ ಶೇ 1.49 ಇದೆ. ರಾಜ್ಯದಲ್ಲಿ ಈವರೆಗೆ 29,94,963 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,50,130 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 38,193 ಮಂದಿ ಸಾವನ್ನಪ್ಪಿದ್ದಾರೆ.
ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ (ಎಸ್‌ಡಿಎಂ) ಮತ್ತೆ 22 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದ 2 ದಿನಗಳಲ್ಲಿ 182 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ ಒಟ್ಟು 204 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಉಳಿದವರ ತಪಾಸಣಾ ವರದಿಗಳು ಮಧ್ಯರಾತ್ರಿಯ ನಂತರ ಬರಲಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ 224 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 129 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಬ್ಬರು ಸೋಂಕಿನಿಂದ ಮೃತಪಟಿದ್ದಾರೆ. ನಗರದಲ್ಲಿ ಪ್ರಸ್ತುತ 5235 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ 12,55,835 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,34,272 ಮಂದಿ ಸಾವನ್ನಪ್ಪಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಧಾರವಾಡ 85, ದಕ್ಷಿಣ ಕನ್ನಡ 19, ಮೈಸೂರು 25, ಮಂಡ್ಯ, ಗದಗ, ಚಾಮರಾಜನಗರ, ಬಳ್ಳಾರಿ, ಬಾಗಲಕೋಟೆ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಚಿತ್ರದುರ್ಗ 4, ಹಾಸನ, ಕೊಡಗು 2, ಕೋಲಾರ 3, ಶಿವಮೊಗ್ಗ, ಉಡುಪಿ 3, ತುಮಕೂರು, ಉತ್ತರ ಕನ್ನಡ, ಚಿಕ್ಕಮಗಳೂರು 5
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕೊಡಗು, ರಾಯಚೂರು 1.
ಇದನ್ನೂ ಓದಿ: ಹೊಸ ತಳಿಯ ಕೊರೊನಾ ಪ್ರಕರಣ ಕಂಡುಬಂದ ಹಿನ್ನೆಲೆ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ಇದನ್ನೂ ಓದಿ: Coronavirus: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ