ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜ.18) 41,457 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 20 ಜನರು ಕೊವಿಡ್ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 2,50,381 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 22.30, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.04. ಇಂದು 8353 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 32,88,700 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 29,99,825 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,465 ಜನರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 25,595 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 4514 ಮಂದಿ ಚೇತರಿಸಿಕೊಂಡಿದ್ದಾರೆ, ಏಳು ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ನಗರದಲ್ಲಿ 1,78,328 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 16,465 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 14,58,349 ಜನರಲ್ಲಿ ಸೋಂಕು ದೃಢಪಟ್ಟಿದ್ದು, 12,63,555 ಜನರು ಚೇತರಿಸಿಕೊಂಡಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬಾಗಲಕೋಟೆ 58, ಬಳ್ಳಾರಿ 714, ಬೆಳಗಾವಿ 418, ಬೆಂಗಳೂರು ಗ್ರಾಮಾಂತರ 1116, ಬೆಂಗಳೂರು ನಗರ 25,595, ಬೀದರ್ 235, ಚಾಮರಾಜನಗರ 198, ಚಿಕ್ಕಬಳ್ಳಾಪುರ 358, ಚಿಕ್ಕಮಗಳೂರು 362, ಚಿತ್ರದುರ್ಗ 402, ದಕ್ಇಣ ಕನ್ನಡ 1058, ದಾವಣಗೆರೆ 257, ಧಾರವಾಡ 726, ಗದಗ 150, ಹಾಸನ 1739, ಹಾವೇರಿ 44, ಕಲಬುರಗಿ 514, ಕೊಡಗು 89, ಕೋಲಾರ 481, ಕೊಪ್ಪಳ 83, ಮಂಡ್ಯ 895, ಮೈಸೂರು 1848, ರಾಯಚೂರು 205, ರಾಮನಗರ 379, ಶಿವಮೊಗ್ಗ 306, ತುಮಕೂರು 1731, ಉಡುಪಿ 801, ಉತ್ತರ ಕನ್ನಡ 587, ವಿಜಯಪುರ 53, ಯಾದಗಿರಿ 55.
ಇಂದಿನ 18/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/qpJKxqJO1c @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/t9hjCv1vtj
— K’taka Health Dept (@DHFWKA) January 18, 2022
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 7, ತುಮಕೂರು 2, ಮೈಸೂರು 3, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾಸನ, ರಾಮನಗರ, ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ