ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಏರಿಕೆ: ದ.ಕನ್ನಡ, ಉಡುಪಿಯಲ್ಲಿ ತಲಾ ಒಬ್ಬರು ಬಲಿ
ನಿನ್ನೆ(ಜುಲೈ 26) ರಾಜ್ಯದಲ್ಲಿ ಹೊಸದಾಗಿ 1,425 ಜನರಲ್ಲಿ ಕೊರೊನಾ ಪತ್ತೆಯಾಗಿತ್ತು. ಆದರೆ ಇಂದು ರಾಜ್ಯದಲ್ಲಿ ಹೊಸದಾಗಿ 1,624 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಬೆಂಗಳೂರು: ಮಹಾಮಾರಿ ಕೊರೊನಾ(Coronavirus) ಮತ್ತೆ ಸದ್ದು ಮಾಡಲು ಆರಂಭಿಸಿದೆ. ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಹಾಗೂ ನಿನ್ನೆ ಕೊರೊನಾಗೆ(Coronavirus Death) ಒಬ್ಬರು ಬಲಿಯಾಗಿದ್ದರು. ಇಂದು ಇಬ್ಬರು ಮೃತಪಟ್ಟಿದ್ದಾರೆ. ದ.ಕನ್ನಡ ಒಬ್ಬರು, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ನಿನ್ನೆ(ಜುಲೈ 26) ರಾಜ್ಯದಲ್ಲಿ ಹೊಸದಾಗಿ 1,425 ಜನರಲ್ಲಿ ಕೊರೊನಾ ಪತ್ತೆಯಾಗಿತ್ತು. ಆದರೆ ಇಂದು ರಾಜ್ಯದಲ್ಲಿ ಹೊಸದಾಗಿ 1,624 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸದ್ಯ ಬೆಂಗಳೂರಿನಲ್ಲಿ ನಿನ್ನೆಗಿಂತ ಇಂದು ಕೊರೊನಾ ಕೇಸ್ಗಳು ಕೊಂಚ ಕಡಿಮೆಯಾಗಿವೆ. ನಿನ್ನೆ 1,198 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬೆಂಗಳೂರಿನಲ್ಲಿಂದು 1,176 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೂ ನಿನ್ನೆ ಒಬ್ಬರು ಮೃತಪಟ್ಟಿದ್ದರು. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ದ.ಕನ್ನಡ ಒಬ್ಬರು, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8,836 ಇದೆ. ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 4.87.
ಇಂದಿನ 27/07/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/mWY3zaFRiU @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/KZ697JY5xA
— K'taka Health Dept (@DHFWKA) July 27, 2022
ಭಾರತದಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆ, 57 ಸಾವು
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 57 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ.
ಸಕ್ರಿಯ ಪ್ರಕರಣಗಳು 145026 ಇದ್ದು ಪಾಸಿಟಿವಿಟಿ ದರ ಶೇ.4.31ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 27,37,235ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,79,61,722 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.
ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 526167ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 20,742ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43267571ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
Published On - 9:14 pm, Wed, 27 July 22