ರಾಜ್ಯದಲ್ಲಿ ಇಂದು 1,425 ಜನರಿಗೆ ಕೊರೊನಾ ದೃಢ: ಧಾರವಾಡದಲ್ಲಿ ಒಬ್ಬರು ಬಲಿ

ಧಾರವಾಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8,861 ಇದೆ.

ರಾಜ್ಯದಲ್ಲಿ ಇಂದು 1,425 ಜನರಿಗೆ ಕೊರೊನಾ ದೃಢ: ಧಾರವಾಡದಲ್ಲಿ ಒಬ್ಬರು ಬಲಿ
ಕೊವಿಡ್-19
Follow us
TV9 Web
| Updated By: ಆಯೇಷಾ ಬಾನು

Updated on:Jul 26, 2022 | 9:34 PM

ಬೆಂಗಳೂರು: ರಾಜ್ಯದಲ್ಲಿ ಇಂದು 1,425 ಜನರಿಗೆ ಕೊರೊನಾ(Coronavirus) ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿಂದು 1,198 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಧಾರವಾಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8,861 ಇದೆ. ಮತ್ತು ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 6.15ರಷ್ಟಿದೆ.

ಧಾರವಾಡ ಜಿಲ್ಲೆಯಲ್ಲಿ ಕೊವಿಡ್‌ಗೆ ಓರ್ವರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗಾಂಧಿನಗರದ 77 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ವೃದ್ಧರಿಗೆ ಜುಲೈ 20ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇನ್ನು ಜಿಲ್ಲೆಯಲ್ಲಿ ಕೊವಿಡ್‌ಗೆ ವೃದ್ಧ ಮೃತಪಟ್ಟ ಹಿನ್ನೆಲೆ ಕೋವಿಡ್ ಮುಂಜಾಗ್ರತೆ ವಹಿಸುವಂತೆ ಡಿಸಿ ಮನವಿ ಮಾಡಿದ್ದಾರೆ.

ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 147512 ಇದ್ದು ಪಾಸಿಟಿವಿಟಿ ದರ ಶೇ.3.48ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 3042476ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,50,57,717 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526110ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18159ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43246829ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 8:12 pm, Tue, 26 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು