MLC Election Result: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಎದುರು ಸೋಲುಂಡ ಕೋಟಿಗಳ ಧನಿಕ ಕಾಂಗ್ರೆಸ್​ ಅಭ್ಯರ್ಥಿ ಕೆಜಿಎಫ್ ಬಾಬು

ಕಾಂಗ್ರೆಸ್‌ನ ಯೂಸಫ್‌ ಷರೀಫ್‌ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು.

MLC Election Result: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಎದುರು ಸೋಲುಂಡ ಕೋಟಿಗಳ ಧನಿಕ ಕಾಂಗ್ರೆಸ್​ ಅಭ್ಯರ್ಥಿ ಕೆಜಿಎಫ್ ಬಾಬು
ಕೆಜಿಎಫ್ ಬಾಬು
Follow us
TV9 Web
| Updated By: ಆಯೇಷಾ ಬಾನು

Updated on: Dec 14, 2021 | 12:21 PM

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಸದ್ಯ ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದ್ದು 25 ಸ್ಥಾನ, 3 ಪಕ್ಷ ಮತ್ತು 90 ಅಭ್ಯರ್ಥಿಗಳ ಹಣೆಬರಹ ಒಂದೊಂದಾಗಿ ಹೊರ ಬೀಳುತ್ತಿದೆ. ಸದ್ಯ ಈಗ ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್‌ ಮತ್ತು ಯೂಸಫ್‌ ಷರೀಫ್‌ ನಡುವೆ ನೇರ ಹಣಾಹಣಿ ಇತ್ತು. ಗೋಪಿನಾಥ್‌ ಈ ಹಿಂದೆ ಕೂಡ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನ್ನು ಅನುಭವಿಸಿದ್ದರು. ಬಿಇ ಪದವೀಧರ ಆಗಿರುವ ಗೋಪಿನಾಥ್‌ ಅವರು ಬಿಜೆಪಿಯಲ್ಲಿ ಹಲವು ಹುದ್ದೆ ನಿರ್ವಹಿಸಿದ್ದರು. ಪಕ್ಷವೇ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‌ನ ಯೂಸಫ್‌ ಷರೀಫ್‌ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು. ಅವರ ವಿರುದ್ಧದ ಹಳೆಯ ಪ್ರಕರಣವೊಂದನ್ನು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಕೆದಕಿದ್ದರಿಂದ ಸಾಕಷ್ಟು ಚರ್ಚೆಯನ್ನು ಅದು ಹುಟ್ಟು ಹಾಕಿತ್ತು. 2015ರಲ್ಲಿ ಬಿಜೆಪಿಯ ದೊಡ್ಡ ಬಸವರಾಜು ವಿರುದ್ಧ ಜಯಗಳಿಸಿದ್ದ ಕಾಂಗ್ರೆಸ್‌ನ ಎಂ.ನಾರಾಯಣಸ್ವಾಮಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ಕಾಂಗ್ರೆಸ್‌ ಯೂಸಫ್‌ಗೆ ಟಿಕೆಟ್‌ ನೀಡಿತ್ತು. ಬಿಜೆಪಿಯ ಮತದಾರರು ಹೆಚ್ಚಿದ್ದರೂ ಕಾಂಗ್ರೆಸ್‌ಗೆ ಗೆಲ್ಲುವ ಆತ್ಮ ವಿಶ್ವಾಸ ಇತ್ತು. ಆದರೆ ನಿರೀಕ್ಷೆ ಹುಸಿಯಾಗಿ ಬಿಜೆಪಿ ಐತಿಹಾಸಿಕ ಗೆಲುವು ಪಡೆದಿದೆ.

ಫಲಿತಾಂಶ ತಿಳಿಯುತ್ತಿದ್ದಂತೆ ಕೆಜಿಎಫ್ ಬಾಬು ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ನಡೆದು ಆಟೋ ಹತ್ತಿ ಮನೆಗೆ ಹೊರಟ್ರು.

ಇದನ್ನೂ ಓದಿ: Karnataka MLC Election Results 2021: ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವು