AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಕರ್ನಾಟಕಕ್ಕೆ ಮತ್ತೆ ಕೊರೊನಾ ಕಂಟಕ, 24 ಗಂಟೆಗಳಲ್ಲಿ ಬರೋಬ್ಬರಿ ಶೇ, 56ರಷ್ಟು ಏರಿಕೆ

ಏಪ್ರಿಲ್ 24ರ ಸೋಮವಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೇಕಡಾ 56 ರಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 339 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Coronavirus: ಕರ್ನಾಟಕಕ್ಕೆ ಮತ್ತೆ ಕೊರೊನಾ ಕಂಟಕ, 24 ಗಂಟೆಗಳಲ್ಲಿ ಬರೋಬ್ಬರಿ ಶೇ, 56ರಷ್ಟು ಏರಿಕೆ
ಕೊರೊನಾವೈರಸ್ ಪರೀಕ್ಷೆ
TV9 Web
| Edited By: |

Updated on:Apr 26, 2023 | 8:02 AM

Share

ಬೆಂಗಳೂರು: ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಶರವೇಗದಲ್ಲಿ ಏರಿಕೆ ಆಗ್ತಿವೆ. ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಏಪ್ರಿಲ್ 24ರ ಸೋಮವಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೇಕಡಾ 56 ರಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 339 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇಬ್ಬರು ಸೋಂಕಿಗೆ ಬಲಿಯಾಗಿದ್ದರು. ಈ ಮೂಲಕ ಪಾಸಿಟಿವ್ ಪ್ರಮಾಣ ಶೇ 11.3ಕ್ಕೆ ತಲುಪಿದೆ. ಇನ್ನು ಏಪ್ರಿಲ್ 25ರ ಮಂಗಳವಾರ 241 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಕರ್ನಾಟಕ ರಾಜ್ಯದಲ್ಲಿ ಸೋಮವಾರ ಒಂದೇ ದಿನ 339 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಬ್ಬರು ಸೋಂಕಿಗೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಲ್ಲೇ 306 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ಇನ್ನು ಹಿಂದಿನ ಪ್ರಕರಣಗಳಿಗೆ ಹೋಲಿಸಿದರೆ ಶೇಕಡಾ 56ರಷ್ಟು ಹೆಚ್ಚಾಗಿವೆ. ಏಪ್ರಿಲ್ 25ರ ಮಂಗಳವಾರ 241 ಪ್ರಕರಣಗಳು ಪತ್ತೆಯಾಗಿವೆ. ಸದ್ಯ ನಿನ್ನೆಗಿಂತ ಇಂದು ಸೋಂಕಿತ ಸಂಖ್ಯೆ ಕಡಿಮೆಯಾಗಿದ್ದರೂ ಆತಂಕ ತಪ್ಪಿದಲ್ಲ. ಏಕೆಂದರೆ ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಏಪ್ರಿಲ್ 25ರ ಮಂಗಳವಾರ ರಾಜ್ಯದಲ್ಲಿ 289ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1895 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: Karnataka Covid Updates: ರಾಜ್ಯದಲ್ಲಿ ಕೊರೊನಾ ಏರಿಕೆ, ಕಳೆದ 24 ಗಂಟೆಯಲ್ಲಿ 537 ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಎಂಟು ತಿಂಗಳು ಬಳಿಕ ಕೊರೊನಾ ಕೇಸ್ ತೀವ್ರ ಏರಿಕೆ ಕಂಡು ಬರ್ತಿದೆ. ಗರಿಷ್ಠ ಪ್ರಮಾಣದಲ್ಲಿ ಕೇಸ್ ಏರಿಕೆ ರಾಜ್ಯದ ಜನರ ಆತಂಕಕ್ಕೆ ಕಾರಣವಾಗದೆ. ಇನ್ನೂ ಮೇ ತಿಂಗಳ ಕೊನೆಯವರೆಗೂ ಕೇಸ್ ಏರಿಕೆಯ ಆತಂಕವನ್ನ ಆರೋಗ್ಯ ಇಲಾಖೆ ಹೊರ ಹಾಕಿದೆ. ರಾಜ್ಯದಲ್ಲಿ ಚುನಾವಣೆಯ ಸಂದರ್ಭದಲ್ಲಿಯೇ ಕೇಸ್ ಡಬ್ಲಿಂಗ್ ಆಗ್ತೀದ್ದು ಕಳೆದ ತಿಂಗಳು 15 ಜನರು ಕೊವಿಡ್ ಗೆ ಬಲಿಯಾಗಿದ್ರೆ ಈ ತಿಂಗಳು 20 ದಿನದಲ್ಲಿಯೇ ಸಾವಿನ ಸಂಖ್ಯೆ 15ರ ಗಡಿದಾಟಿದೆ. ನಿತ್ಯ 500 ಕ್ಕೂ ಹೆಚ್ಚು ಕೇಸ್ ದಾಖಲಾಗ್ತಿದೆ. ಅಷ್ಟೇ ಅಲ್ದೆ ವಿಪರೀತ ಬೇಸಿಗೆ ಹವಮಾನದಿಂದ ರಾಜ್ಯದಲ್ಲಿ ಮುಂದಿನ ತಿಂಗಳವರೆಗೂ ಮತ್ತಷ್ಟು ಕೇಸ್ ಏರಿಕೆಯ ಆತಂಕ ಎದುರಾಗಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಏರಿಕೆಯ ಸಾಧ್ಯತೆ ಹಿನ್ನಲೆ ಕೇಂದ್ರ ಆರೋಗ್ಯ ಇಲಾಖೆಯೂ ರಾಜ್ಯಕ್ಕೆ ಎಚ್ಚರಿಕೆ ನೀಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಳ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಿದೆ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಮೇಲೆ ಹೆಚ್ಚು ನಿಗಾ ವಹಿಸಿಸುವಂತೆ ಹಾಗೂ ಉಸಿರಾಟದ ತೊಂದರೆ, ಜ್ವರ ಮಾದರಿಯ ಐಎಲ್‌ಐ ಪ್ರಕರಣಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಎಚ್ಚರಿಕೆ ನೀಡಿದ್ದು ಕೇಂದ್ರದ ಸೂಚನೆ ಬೆನ್ನಲೆ ಅಲರ್ಟ್ ಆದ ರಾಜ್ಯ ಆರೋಗ್ಯ ಇಲಾಖೆ ಕೊವಿಡ್ ನಿಯಂತ್ರಣಕ್ಕೆ ಮುನ್ನಚ್ಚರಿಕೆ ವಹಿಸಲು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 26 April 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ