Covid 19 Karnataka Update: ಕರ್ನಾಟಕದಲ್ಲಿ 1224 ಮಂದಿಗೆ ಕೊರೊನಾ ಸೋಂಕು, 22 ಸಾವು
ಬೆಂಗಳೂರು ನಗರದಲ್ಲಿ ಬುಧವಾರ 309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1224 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 22 ಜನರು ಸಾವನ್ನಪ್ಪಿದ್ದಾರೆ. ಒಟ್ಟು 1668 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.62, ಸೋಂಕಿತರ ಸಾವಿನ ಪ್ರಮಾಣ ಶೇ 1.79 ಇದೆ. ಕರ್ನಾಟಕದಲ್ಲಿ ಈವರೆಗೆ 29,42,250 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,85,700 ಮಂದಿ ಚೇತರಿಸಿಕೊಂಡಿದ್ದಾರೆ. ಮೃತರ ಒಟ್ಟು ಸಂಖ್ಯೆ 37,206. ರಾಜ್ಯದಲ್ಲಿ ಪ್ರಸ್ತುತ 19,318 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.
ಬೆಂಗಳೂರು ನಗರದಲ್ಲಿ ಬುಧವಾರ 309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. 657 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,35,910 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,12,705 ಮಂದಿ ಚೇತರಿಸಿಕೊಂಡಿದ್ದಾರೆ. 7231 ಮಂದಿಯಲ್ಲಿ ಸೋಂಕು ಸಕ್ರಿಯವಾಗಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 309, ದಕ್ಷಿಣ ಕನ್ನಡ 217, ಉಡುಪಿ 130, ಮೈಸೂರು 102, ಹಾಸನ 95, ತುಮಕೂರು 52, ಉತ್ತರ ಕನ್ನಡ 48, ಕೊಡಗು 41, ಶಿವಮೊಗ್ಗ 42, ಮಂಡ್ಯ 38, ಚಿಕ್ಕಮಗಳೂರು 28, ಬೆಳಗಾವಿ 19, ಕೋಲಾರ 17, ಬೆಂಗಳೂರು ಗ್ರಾಮಾಂತರ 13, ಧಾರವಾಡ 11, ಚಿತ್ರದುರ್ಗ, ಕಲಬುರಗಿ 10, ಯಾದಗಿರಿ 8, ಚಾಮರಾನಗರ 6, ಬಳ್ಳಾರಿ, ಹಾವೇರಿ, ವಿಜಯಪುರ, ದಾವಣಗೆರೆ 3, ಚಿಕ್ಕಬಳ್ಳಾಪುರ, ಕೊಪ್ಪಳ, ಬಾಗಲಕೋಟೆ 2, ರಾಯಚೂರು, ರಾಮನಗರ 1.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ದಕ್ಷಿಣ ಕನ್ನಡ 6, ಉಡುಪಿ, ಬೆಂಗಳೂರು ನಗರ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ, ಬಾಗಲಕೋಟೆ, ಹಾಸನ, ಮೈಸೂರು, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಲಸಿಕೆ ವಿವರ ದೇಶದಲ್ಲಿ ಈವರೆಗೆ 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಹೇಳಿದ್ದಾರೆ.
3ನೇ ಅಲೆ ಎದುರಿಸಲು ಸಿದ್ಧತೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ತಜ್ಞರ ಹೇಳಿಕೆ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಸಂಬಂಧಿಸಿದ ನಿಯಮಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗಣೇಶ ಹಬ್ಬಕ್ಕೆ ಅವಕಾಶ ನೀಡಬೇಕೆಂದು ಹಲವು ಶಾಸಕರು ಒತ್ತಾಯಿಸಿದ್ದಾರೆ. ಹಬ್ಬ ಆಚರಿಸದಂತೆ ನಿರ್ಬಂಧ ವಿಧಿಸುವುದಿಲ್ಲ. ಆದರೆ ಮೊದಲು ಜೀವ, ಆಮೇಲೆ ಉಳಿದಿದ್ದು ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದು ಅವರು ಮನವಿ ಮಾಡಿದರು.
ಇಂದಿನ 25/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/flHEvLay0p @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/RjJAgGSEUu
— K’taka Health Dept (@DHFWKA) August 25, 2021
(Karnataka Covid Numbers 1224 Infected of Coronavris on August 25)
ಇದನ್ನೂ ಓದಿ: ಕೊರೊನಾ ವೈರಸ್ನಿಂದ ಚೇತರಿಸಿಕೊಂಡ ಬಳಿಕವೂ ತಲೆ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆಯೇ?
ಇದನ್ನೂ ಓದಿ: ಕೇರಳದಲ್ಲಿ ಒಂದೇ ದಿನ 30 ಸಾವಿರಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ