ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ ಒಟ್ಟು 973 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 17 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1071 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 17,386 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.69, ಸೋಂಕಿನಿಂದ ಸಾವನ್ನಪ್ಪುವ ಪ್ರಮಾಣ ಶೇ 1.74 ಇದೆ.
ರಾಜ್ಯದಲ್ಲಿ ಈವರೆಗೆ 29,56,137 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,01,299 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,426 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಮವಾರ ಸೋಂಕಿತರ ಪ್ರಮಾಣ ಒಂದು ಸಾವಿರಕ್ಕಿಂತಲೂ ಕಡಿಮೆ ವರದಿಯಾಗಿರುವುದು ಈಚಿನ ದಿನಗಳಲ್ಲಿ ಗಮನಾರ್ಹ ಬೆಳವಣಿಗೆ ಎನಿಸಿದೆ.
ಬೆಂಗಳೂರು ನಗರದಲ್ಲಿ ಸೋಮವಾರ 243 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 260 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಈವರೆಗೆ 12,39,724 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,16,511 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 7180 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 16,032 ಮಂದಿ ಸಾವನ್ನಪ್ಪಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ದಕ್ಷಿಣ ಕನ್ನಡ 258, ಬೆಂಗಳೂರು ನಗರ 243, ಮೈಸೂರು 78, ಹಾಸನ 62, ಉಡುಪಿ 53, ಕೊಡಗು 52, ಶಿವಮೊಗ್ಗ 37, ತುಮಕೂರು, ಉತ್ತರ ಕನ್ನಡ 31, ಚಿಕ್ಕಮಗಳೂರು 30, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 12, ಮಂಡ್ಯ 11, ಚಿತ್ರದುರ್ಗ 10, ಕಲಬುರಗಿ 8, ದಾವಣಗೆರೆ 7, ಧಾರವಾಡ, ಬಳ್ಳಾರಿ 6, ಚಿಕ್ಕಬಳ್ಳಾಪುರ 4, ಚಾಮರಾಜನಗರ 3, ಬೀದರ್, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ 1.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 8, ದಕ್ಷಿಣ ಕನ್ನಡ, ಹಾವೇರಿ 2, ಬಾಗಲಕೋಟೆ, ತುಮಕೂರು, ಉಡುಪಿ, ಉತ್ತರ ಕನ್ನಡ ಹಾಸನ 1.
ಇಂದಿನ 06/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/tUMYXfTAu4 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/34uIdLGNsw
— K’taka Health Dept (@DHFWKA) September 6, 2021
(Karnataka Covid Numbers 973 infected 17 deaths due to coronavirus on September 6)
ಇದನ್ನೂ ಓದಿ: Coronavirus cases in India: ದೇಶದಲ್ಲಿ 38,948 ಹೊಸ ಕೊವಿಡ್ ಪ್ರಕರಣ ಪತ್ತೆ, 219 ಮಂದಿ ಸಾವು
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿದೆ ನಕಲಿ ಕೊವಿಡ್ 19 ಲಸಿಕೆಗಳ ಹಾವಳಿ; ಅಸಲಿ..ನಕಲಿ ಪತ್ತೆ ಹಚ್ಚೋದು ಹೇಗೆ? ಇಲ್ಲಿದೆ ಮಾಹಿತಿ
Published On - 8:26 pm, Mon, 6 September 21