Karnataka Covid19 Update: ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕರ್ನಾಟಕದಲ್ಲಿಂದು 188 ಪ್ರಕರಣಗಳು ಪತ್ತೆ, 12 ಮಂದಿ ಸಾವು
ರಾಜ್ಯದಲ್ಲಿ 188 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 816 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈ ವರೆಗೆ ಒಟ್ಟು 38,97,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ನಿನ್ನೆ(ಮಾರ್ಚ್ 01) ಹೊಸದಾಗಿ 202 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು (ಮಾರ್ಚ್ 02) ರಾಜ್ಯದಲ್ಲಿ ಹೊಸದಾಗಿ 188 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 12 ಜನ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 106 ಕೊರೊನಾ ಪ್ರಕರಣ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ನಾಲ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 4,207. ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 0.45 ಇದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ 188 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 816 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈ ವರೆಗೆ ಒಟ್ಟು 38,97,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,969 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 4,207 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 106 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,778 ಕ್ಕೆ ಏರಿಕೆಯಾಗಿದೆ. 17,78, 778 ಸೋಂಕಿತರ ಪೈಕಿ 17,59,118 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,924 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2735 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 106, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 2, ದಾವಣಗೆರೆ 5, ಧಾರವಾಡ 1, ಗದಗ 3, ಹಾಸನ 6, ಹಾವೇರಿ 0, ಕಲಬುರಗಿ 5, ಕೊಡಗು 3, ಕೋಲಾರ 3, ಕೊಪ್ಪಳ 0, ಮಂಡ್ಯ 3, ಮೈಸೂರು 9, ರಾಯಚೂರು 1, ರಾಮನಗರ 1, ಶಿವಮೊಗ್ಗ 6, ತುಮಕೂರು 3, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 02/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/kUcGj1gwl4 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/3k1xbuLkC7
— K'taka Health Dept (@DHFWKA) March 2, 2022
ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ರಷ್ಯಾ; ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,915 ಹೊಸ ಕೊರೊನಾ ಪ್ರಕರಣಗಳು ಪತ್ತೆ, 16,864 ಸೋಂಕಿತರು ಗುಣಮುಖ
Published On - 9:33 pm, Wed, 2 March 22