Karnataka Covid19 Update: ಕರ್ನಾಟಕದಲ್ಲಿಂದು ಹೊಸದಾಗಿ 202 ಪ್ರಕರಣಗಳು ಪತ್ತೆ, 7 ಮಂದಿ ಸಾವು

Karnataka Covid19 Update: ಕರ್ನಾಟಕದಲ್ಲಿಂದು ಹೊಸದಾಗಿ 202 ಪ್ರಕರಣಗಳು ಪತ್ತೆ, 7 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ರಾಜ್ಯದಲ್ಲಿ 202 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,265 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,96,423 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

TV9kannada Web Team

| Edited By: Ayesha Banu

Mar 01, 2022 | 8:24 PM

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ (ಫೆಬ್ರವರಿ 28) 268 ಜನರಿಗೆ ಕೊರೊನಾ ಸೋಂಕು(Coronavirus) ತಗುಲಿದ್ದು ದೃಢವಾಗಿತ್ತು. ಸದ್ಯ ಇಂದು (ಮಾರ್ಚ್ 01) ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಇಂದು ಹೊಸದಾಗಿ 202 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನ ಬಲಿಯಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು 150 ಕೊರೊನಾ ಪ್ರಕರಣ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಇಂದು ಕೊರೊನಾಗೆ ಮೂವರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ 202 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,41,265 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,96,423 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 07 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,957 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 4,847 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 150 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,78,672 ಕ್ಕೆ ಏರಿಕೆಯಾಗಿದೆ. 17,78, 672 ಸೋಂಕಿತರ ಪೈಕಿ 17,58,748 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂರು ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,920 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 3,003 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 150, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 4, ಧಾರವಾಡ 0, ಗದಗ 3, ಹಾಸನ 2, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 6, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 10, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ರಷ್ಯನ್ನರ ದಾಳಿಗೆ ಬಲಿಯಾದ ಹಾವೇರಿ ವಿದ್ಯಾರ್ಥಿಯ ಪೋಷಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,915 ಹೊಸ ಕೊರೊನಾ ಪ್ರಕರಣಗಳು ಪತ್ತೆ, 16,864 ಸೋಂಕಿತರು ಗುಣಮುಖ

Follow us on

Related Stories

Most Read Stories

Click on your DTH Provider to Add TV9 Kannada