Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಏರಿಕೆ ರಾಜ್ಯದಲ್ಲಿ ಹೊಸದಾಗಿ 217 ಪ್ರಕರಣಗಳು ಪತ್ತೆ, ಏಳು ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 158 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,80,015 ಕ್ಕೆ ಏರಿಕೆಯಾಗಿದೆ. 17,80,015 ಸೋಂಕಿತರ ಪೈಕಿ ಒಟ್ಟು 17,60,802 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಏರಿಕೆ ರಾಜ್ಯದಲ್ಲಿ ಹೊಸದಾಗಿ 217 ಪ್ರಕರಣಗಳು ಪತ್ತೆ, ಏಳು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Mar 10, 2022 | 9:22 PM

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 09ರಂದು 181 ಜನರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಹೊಸದಾಗಿ 217 ಜನರಿಗೆ ಕೊರೊನಾ ಸೋಂಕು ತಗುಲಿದ್ದು ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 39,43,325ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 301 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 39,00,428 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 40013 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,846 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 0.44 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 158 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,80,015 ಕ್ಕೆ ಏರಿಕೆಯಾಗಿದೆ. 17,80,015 ಸೋಂಕಿತರ ಪೈಕಿ ಒಟ್ಟು 17,60,802 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾಗೆ ಮೂರು ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,940 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,272 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ ಒ, ಬೆಂಗಳೂರು ನಗರ 158, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 0, ಚಿತ್ರದುರ್ಗ 9, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 2, ಕೊಡಗು 0, ಕೋಲಾರ 3, ಕೊಪ್ಪಳ 0, ಮಂಡ್ಯ 4, ಮೈಸೂರು 9, ರಾಯಚೂರು 0, ರಾಮನಗರ 7, ಶಿವಮೊಗ್ಗ 5, ತುಮಕೂರು 1, ಉಡುಪಿ 0, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಆಪ್ ಜಯಭೇರಿ ಬಾರಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಭಗವಂತ್ ಮಾನ್​​ರ ಹಳೇ ಕಾಮಿಡಿ ವಿಡಿಯೊ

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಇಳಿಕೆ ರಾಜ್ಯದಲ್ಲಿ 181 ಹೊಸ ಪ್ರಕರಣ, ಇಬ್ಬರು ಸಾವು

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ